ಹಾಸನ: ಕರ್ನಾಟಕ ಕೌಶಲ ಅಭಿವೃದ್ದಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಹಾಸನ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಮಾ. 5 ರಂದು ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಆರ್. ಪೂರ್ಣಿಮಾ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಂಭಾಗಣದಲ್ಲಿ ಶುಕ್ರವಾರ ನಡೆದ ಉದ್ಯೋಗ ಮೇಳದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಉದ್ಯೋಗ ಮೇಳದಲ್ಲಿ ಜಿಲ್ಲೆಯ ಎಲ್ಲ ಪದವಿ, ಡಿಪ್ಲೊಮಾ, ಐಟಿಐ ಕಾಲೇಜುಗಳ ಪದವೀಧರ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಮಾಹಿತಿ ನೀಡಲು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಅವರು, ಅರ್ಹತೆ ಇರುವ ಪ್ರತಿಯೊಬ್ಬ ಅಭ್ಯರ್ಥಿಗೂ ಉದ್ಯೋಗ ದೊರೆಯಬೇಕು. ಉದ್ಯೋಗ ಆಕಾಂಕ್ಷಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಖಾಸಗಿ ಕೈಗಾರಿಕೆಗಳಲ್ಲಿ ಉದ್ಯೋಗ ಕಲ್ಪಿಸಲು ಈ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ ಎಂದರು.

ಉದ್ಯೋಗ ಮೇಳದ ನಿರ್ವಹಣೆಗಾಗಿ ಪ್ರತಿ ತಾಲ್ಲೂಕಿಗೂ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲು, ಮೇಳದ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮೀಣ ಭಾಗದ ಯುವಕರಿಗೆ ಮಾಹಿತಿ ತಲುಪಿಸಲು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೂ ಹಾಗೂ ನಗರ ಪ್ರದೇಶಗಳಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಮತ್ತು ಆಯುಕ್ತರಿಗೆ ತಿಳಿಸಿದರು.

ಮಾಧ್ಯಮಗಳು, ಬ್ಯಾನರ್, ಬಸ್ ನಿಲ್ದಾಣದ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಮುಖ್ಯವಾಗಿ ಉದ್ಯೋಗದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಮತ್ತು ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಈ ಸೌಲಭ್ಯ ಬಳಸಿಕೊಳ್ಳುವಂತೆ ಮೊಬೈಲ್ಗಳ ಮೂಲಕ ಸಂದೇಶಗಳನ್ನು ಕಳುಹಿಸಲು ಕ್ರಮ ಕೈಗೊಳ್ಳಬೇಕು. ಅಭ್ಯರ್ಥಿಗಳ ಅನುಕೂಲಕ್ಕಾಗಿ ಕಾಲೇಜು ಆವರಣದಲ್ಲಿ ಕಂಪನಿಗಳ ವಿವರ ಹಾಗೂ ಸಂದರ್ಶನ ನಡೆಯುವ ಕೊಠಡಿಗಳ ಮಾಹಿತಿಯ ಪಟ್ಟಿಯನ್ನು ಪ್ರದರ್ಶಿಸಲಾಗುವುದು ಎಂದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಕಾಲೇಜು ಪ್ರಾಂಶುಪಾಲರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.