ಹಾಸನ: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ಎರಡನೇ ಅವಧಿಗೆ ವಾಸು ಸಮುದ್ರವಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ್ ತಿಳಿಸಿದ್ದಾರೆ.

2018 ರಿಂದ 2023 ರವರೆಗೆ ಮೊದಲ ಅವಧಿಯಲ್ಲಿ ಹಾಸನ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಯಶಸ್ವಿ ಕಾರ್ಯಕ್ರಮಗಳ ಮೂಲಕ ವೇದಿಕೆ ಯನ್ನು ಗುಣಾತ್ಮಕವಾಗಿ ಕಟ್ಟಿ ಬೆಳೆಸಿದ್ದ ವಾಸು ಸಮುದ್ರವಳ್ಳಿ ಅವರನ್ನು ಮತ್ತೊಂದು ಅವಧಿಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಟ್ರಸ್ಟಿಗಳಾದ ನಾಗರಾಜ್ ದೊಡ್ಡಮನಿ, ಎಚ್.ಎಸ್. ಬಸವರಾಜ್, ವಾಸು ಸಮುದ್ರವಳ್ಳಿ ಉಪಸ್ಥಿತರಿದ್ದರು. ದೇಸು ಆಲೂರು ಹಾಗೂ ಡಾ. ಪಿ. ದಿವಾಕರ ನಾರಾಯಣ ಸಮ್ಮತಿ ಸೂಚಿಸಿದರು. ವೇದಿಕೆಯ ಬೈಲಾ ನಿಯಮದಡಿ ಹಾಸನ ಜಿಲ್ಲೆ ಹಾಗೂ ಎಲ್ಲ ತಾಲ್ಲೂಕು ಗಳಲ್ಲಿ ಸಂಘಟನೆಯನ್ನು ಇನ್ನಷ್ಟು ಬಲಪಡಿಸಲು ತೀರ್ಮಾನಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-36-1877083729

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.