ಹಾಸನ: ಅತ್ತಿ ಚೌಡೇನಹಳ್ಳಿಯಲ್ಲಿ ಕಾಣಿಸಿಕೊಂಡ ಚಿರತೆ, ಜನರಲ್ಲಿ ಆತಂಕ

ಹಾಸನ: ಹೊಳೆನರಸೀಪುರ ತಾಲ್ಲೂಕಿನ ಅತ್ತಿ ಚೌಡೇನಹಳ್ಳಿ ಗ್ರಾಮದಲ್ಲಿ ಗುರುವಾರ ಸಂಜೆ ಚಿರತೆ ಕಾಣಿಸಿಕೊಂಡಿದ್ದು, ಜನತೆ ಆತಂಕಗೊಂಡಿದ್ದಾರೆ.
ಗ್ರಾಮದ ಕಾಲುವೆ ಏರಿ ಮೇಲೆ ಚಿರತೆ ಓಡಾಡಿರುವ ದೃಶ್ಯವನ್ನು ಸಾರ್ವಜನಿಕರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.
ಚಿರತೆ ಓಡಾಟದಿಂದ ಜನತೆ ಭಯಭೀತರಾಗಿದ್ದು, ಕೂಡಲೇ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಕೆಲ ದಿನಗಳಿಂದ ಜಾನುವಾರು, ಆಡು, ಕುರಿಗಳನ್ನು ತಿಂದು ಹಾಕಿದೆ.
ಹಾಸನದ ಹೊಳೆನರಸೀಪುರ ತಾಲ್ಲೂಕಿನ ಅತ್ತಿ ಚೌಡೇನಹಳ್ಳಿ ಗ್ರಾಮದಲ್ಲಿ ಗುರುವಾರ ಸಂಜೆ ಚಿರತೆ ಕಾಣಿಸಿಕೊಂಡಿದ್ದು, ಜನತೆ ಆತಂಕಗೊಂಡಿದ್ದಾರೆ. ಗ್ರಾಮದ ಕಾಲುವೆ ಏರಿ ಮೇಲೆ ಚಿರತೆ ಓಡಾಡಿರುವ ದೃಶ್ಯವನ್ನು ಸಾರ್ವಜನಿಕರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.#leopard #Hassan pic.twitter.com/A4I7ZAgveU
— ಪ್ರಜಾವಾಣಿ | Prajavani (@prajavani) July 2, 2021
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.