ಹಾಸನ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರು ವಾಸಿಸುವ ಸ್ಥಳ ಸೇರಿದಂತೆ ಜಿಲ್ಲೆಯ ಎಲ್ಲ ಮದ್ಯದ ಅಂಗಡಿಗಳು ನಿಗದಿತ ಸಮಯದಲ್ಲಿ ಮಾತ್ರ ಮದ್ಯ ಮಾರಾಟ ಮಾಡಬೇಕು. ಬೇರೆ ಬಾಗಿಲುಗಳನ್ನು ತೆರೆದು ಮದ್ಯ ಮಾರಾಟ ಮಾಡಿದ ಪ್ರಕರಣಗಳು ಕಂಡು ಬಂದರೆ ಪರವಾನಗಿ ರದ್ದುಪಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

18 ವರ್ಷದೊಳಗಿನ ಮಕ್ಕಳನ್ನು ಮದ್ಯ ಖರೀದಿಗೆ ಬಳಸಿಕೊಳ್ಳುವುದರಿಂದ ಮಕ್ಕಳ ಮೇಲೆ ಪರಿಣಾಮ ಬೀರಬಹುದು. ಮದ್ಯಕ್ಕೆ ಬಲಿಯಾಗಿ ಶಿಕ್ಷಣ, ಅಪರಾಧಕ್ಕೆ ಸಿಲುಕುವ ಸಾಧ್ಯತೆಗಳಿವೆ. ಎಲ್ಲ ಮದ್ಯದ ಅಂಗಡಿಗಳಿಗೂ ಕಡ್ಡಾಯವಾಗಿ ಸೂಚನೆ ನೀಡಬೇಕು ಎಂದು ತಿಳಿಸಿದರು.

ಸಮಿತಿ ಸದಸ್ಯರಾದ ಸಂದೇಶ್, ಮರಿ ಜೋಸೆಫ್, ಮಲ್ಲೇಶ್ ಅಂಬುಗ ಮಾತನಾಡಿ, ಜಿಲ್ಲೆಯಲ್ಲಿ ಹಲವು ಮದ್ಯದ ಅಂಗಡಿಗಳಲ್ಲಿ ಬೆಳಿಗ್ಗೆ 7.30 ರಿಂದಲೇ ಮಾರಾಟ ಪ್ರಾರಂಭ ಮಾಡುತ್ತಾರೆ ಎಂದು ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ತನಿಖಾ ತಂಡವನ್ನು ನೇಮಿಸಿ, ಪರಿಶೀಲಿಸಿ ವರದಿ ಸಲ್ಲಿಸಬೇಕು. ಅಂತಹ ಮದ್ಯದ ಅಂಗಡಿಗಳಿಗೆ ದಂಡ ವಿಧಿಸುವಂತೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಹಾಸನ ತಾಲ್ಲೂಕಿನ ಕಡವರಹಳ್ಳಿ ಗ್ರಾಮದ ಜೀತ ವಿಮುಕ್ತರಿಗೆ ಭೂಮಿ ನೀಡುವ ಕುರಿತು ಕೂಡಲೇ ಸ್ಥಳ ಪರಿಶೀಲಿಸಿ ಸರ್ವೆ ಕಾರ್ಯ ಮುಕ್ತಾಯಗೊಳಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರಿಗೆ ಸೂಚಿಸಿದರು.

ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಡೆಯಾಗಿರುವ ಸಂತ್ರಸ್ತರ ಪುನರ್ವಸತಿ ಕಾಲೊನಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಕಂದಾಯ ಗ್ರಾಮಕ್ಕೆ ಪ್ರಸ್ತಾವ ಸಲ್ಲಿಸುವಂತೆ ಸೂಚಿಸಿದರು.

ಸಕಲೇಶಪುರ ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ ಸರ್ವೆ ನಂಬರ್ 16 ರಲ್ಲಿನ ಗೋಮಾಳದ 3 ಎಕರೆ ಜಮೀನನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ, ಸಮಾಜ ಕಲ್ಯಾಣ ಇಲಾಖೆಗೆ ಮಂಜೂರು ಮಾಡಿ ಪರಿಶಿಷ್ಟ ವರ್ಗಗಳ ಬುಡಕಟ್ಟು ಸಮುದಾಯ ಹಲಸರು ಟ್ರಸ್ಟ್ಗೆ ಗಿಡಮೂಲಿಕೆ ಬೆಳೆಯಲು ನೀಡುವಂತೆ ತಿಳಿಸಿದರು.

ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಪೊಲೀಸ್ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸೇರಿದಂತೆ ಸ್ಥಳೀಯ ಸಮುದಾಯ ಮುಖಂಡರನ್ನು ಸೇರಿಸಿ ಅರಿವು ಕಾರ್ಯಕ್ರಮ ನಡೆಸಬೇಕು. ಪೊಲೀಸ್ ಇಲಾಖೆಯಿಂದ ಗ್ರಾಮಗಳಲ್ಲಿ ಗಸ್ತು ತಿರುಗಬೇಕು. ಶಾಂತಿಪಾಲನ ಸಮಿತಿ ಸಭೆ ನಡೆಸಿ ಸ್ಥಳೀಯ ಸಂಘ ಸಂಸ್ಥೆಗಳ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸುವಂತೆ ಸೂಚಿಸಿದರು.

ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆ ಅಡಿ ಕೊಳವೆಬಾವಿಗಳನ್ನು ಕೊರೆದಿದ್ದು, ಸೆಸ್ಕ್ನಿಂದ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ ಎಂದು ಸಮಿತಿಯ ಸದಸ್ಯರು ಸಭೆ ಗಮನಕ್ಕೆ ತಂದರು. ಅದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಕೂಡಲೇ ಸಂಪರ್ಕ ಕಲ್ಪಿಸಬೇಕು. ಇಲ್ಲದಿದ್ದಲ್ಲಿ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಮಿತಿಯ ಸದಸ್ಯರಾದ ಶಿವಮ್ಮ, ಬೈರೇಶ್ ಶಿವಪ್ಪ ನಾಯಕ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿಧಿ, ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ಕೃಷ್ಣಮೂರ್ತಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ದೂದ್ಫೀರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.