ಹಾಸನ: ರಾಜ್ಯ ರಾಜಕಾರಣದಲ್ಲಿ ಏರಿಳಿತಗಳು ನಡೆಯುತ್ತಿರುವ ಮಧ್ಯೆಯೇ ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯ ತಾಲೀಮು ಶುರುವಾಗಿದೆ. ನಗರ ಸ್ಥಳೀಯ ಸಂಸ್ಥೆಗಳಿಗೆ ಈಗಾಗಲೇ ಕರಡು ಮೀಸಲಾತಿ ಪ್ರಕಟಿಸಲಾಗಿದ್ದು, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿಗೆ ಯಾವುದೇ ಕ್ಷಣದಲ್ಲಿ ಚುನಾವಣೆ ಎದುರಾಗುವ ಸಾಧ್ಯತೆ ಇದೆ. ಇದನ್ನು ಗಮನದಲ್ಲಿ ಇಟ್ಟುಕೊಂಡೇ ರಾಜಕೀಯ ಪಕ್ಷಗಳು ಚುನಾವಣಾ ತಂತ್ರಗಳನ್ನು ಈಗಿನಿಂದಲೇ ಆರಂಭಿಸಿವೆ.

ಆಡಳಿತಾರೂಢ ಕಾಂಗ್ರೆಸ್, ಜಿಲ್ಲೆಯಲ್ಲಿ ತನ್ನ ನೆಲೆ ವಿಸ್ತರಿಸಿಕೊಳ್ಳಲು ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಏಳು ಶಾಸಕರ ಪೈಕಿ ಕಾಂಗ್ರೆಸ್ ಕೇವಲ ಒಬ್ಬ ಶಾಸಕರನ್ನು ಹೊಂದಿದೆ. ಅಲ್ಲದೇ ಕಳೆದ ವರ್ಷ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನ ಶ್ರೇಯಸ್ ಪಟೇಲ್ ಆಯ್ಕೆಯಾಗಿರುವುದು ಪಕ್ಷಕ್ಕೆ ದೊಡ್ಡ ಬಲ ಬಂದಂತಾಗಿದೆ.

ಆದರೆ, ಜಿಲ್ಲೆಯ ಇನ್ನುಳಿದ 6 ವಿಧಾನಸಭಾ ಕ್ಷೇತ್ರಗಳ ಮೇಲೆ ಕಟ್ಟಿರುವ ಕಾಂಗ್ರೆಸ್, ಅಲ್ಲಿಯೂ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸುತ್ತಿದೆ. ಜೊತೆಗೆ ಅವಧಿ ಮುಗಿದಿರುವ ಹಾಸನ ಮಹಾನಗರ ಪಾಲಿಕೆ, ಅರಸೀಕೆರೆ ನಗರಸಭೆ, ಅರಕಲಗೂಡು, ಆಲೂರು ಪಟ್ಟಣ ಪಂಚಾಯಿತಿ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹೊಸ್ತಿಲಲ್ಲಿದೆ.

ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗಳು 2026 ರಲ್ಲಿ ನಡೆಯುವ ಸಾಧ್ಯತೆಗಳು ದಟ್ಟವಾಗಿವೆ. ಇದೆಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡ ಕಾಂಗ್ರೆಸ್, ಚುನಾವಣೆಯ ಸಿದ್ಧತೆಗಳನ್ನು ಆರಂಭಿಸಿದೆ.

ಮೊದಲ ಹಂತದಲ್ಲಿ ಡಿ.6 ರಂದು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ನಗರಕ್ಕೆ ಬರುತ್ತಿದ್ದು, ಫಲಾನುಭವಿಗಳ ಸಮಾವೇಶ, ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಲಿವೆ. ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರು ನಗರಕ್ಕೆ ಭೇಟಿ ನೀಡಿ, ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.

ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಿಂದ ಫಲಾನುಭವಿಗಳನ್ನು ಕರೆತರಲು ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಈ ಮೂಲಕ ಗ್ರಾಮೀಣ ಭಾಗದ ಜನರನ್ನು ಸೇರಿಸಿ, ಪಕ್ಷದ ಕಾರ್ಯಕ್ರಮಗಳನ್ನು ತಿಳಿಸಲು ಕಾಂಗ್ರೆಸ್ ಮುಂದಾಗಿದೆ. ಜೊತೆಗೆ ಮುಂಬರುವ ಚುನಾವಣೆಗಳಲ್ಲಿ ಪಕ್ಷವನ್ನು ಬೆಂಬಲಿಸುವಂತೆ ಜನರಲ್ಲಿ ಮನವಿ ಮಾಡಲು ಯೋಜನೆ ರೂಪಿಸಿದೆ.

ಜೆಡಿಎಸ್ ಪ್ರಾದೇಶಿಕ ಪಕ್ಷವಾಗಿ ಗಟ್ಟಿಯಾಗಿದೆ. ಸಂಖ್ಯೆಯ ಲೆಕ್ಕದಲ್ಲಿ ಕಡಿಮೆ ಇದ್ದರೂ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಪಡೆಯಲಿದೆ
ಎ. ಮಂಜು ಶಾಸಕ

ಸ್ಥಳೀಯ ಸಂಸ್ಥೆ ಚುನಾವಣೆಗಳು ಎದುರಾಗುತ್ತಿವೆ. ಗ್ಯಾರಂಟಿ ಯೋಜನೆ ಸೇರಿದಂತೆ ರಾಜ್ಯ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು
ಬಿ. ಶಿವರಾಂ ಎಐಸಿಸಿ ಸದಸ್ಯ

ಮುಖ್ಯಮಂತ್ರಿ ಉಪ ಮುಖ್ಯಮಂತ್ರಿ ಡಿ.6 ರಂದು ನಗರಕ್ಕೆ ಬರಲಿದ್ದು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ ಅಭಿವೃದ್ಧಿ ಯೋಜನೆ ಶಂಕುಸ್ಥಾಪನೆ ಉದ್ಘಾಟನೆ ನಡೆಯಲಿವೆ
ದೇವರಾಜೇಗೌಡ ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ

ಜನರೊಂದಿಗೆ ಜನತಾದಳ ರಜತ ಮಹೋತ್ಸವದ ಸಂಭ್ರಮದಲ್ಲಿರುವ ಜೆಡಿಎಸ್ ಕೂಡ ಹಿಂದೆ ಬಿದ್ದಿಲ್ಲ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದ ನಂತರ ಜಿಲ್ಲೆಯಲ್ಲೂ ಪಕ್ಷ ಸಂಘಟನೆಗೆ ರೂಪುರೇಷೆ ಸಿದ್ಧಪಡಿಸಿದೆ. ಡಿಸೆಂಬರ್ ಮೊದಲ ವಾರದಲ್ಲಿ ಹಾಸನದ ಎಲ್ಲ ತಾಲ್ಲೂಕಿನಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ಆಯೋಜಿಸಿದ್ದು ಜನವರಿಯಲ್ಲಿ ‘ಜನರೊಂದಿಗೆ ಜನತಾದಳ’ ಸಮ್ಮೇಳನ ಆಯೋಜಿಸುವ ಕುರಿತು ಚಿಂತಿಸಲಾಗಿದೆ. ಈ ಕುರಿತು ಈಗಾಗಲೇ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಜೊತೆಗೆ ಚರ್ಚಿಸಿರುವ ಜಿಲ್ಲೆಯ ಜೆಡಿಎಸ್ ಮುಖಂಡರು ಜಿಲ್ಲೆಯಲ್ಲಿ ತಳಮಟ್ಟದಲ್ಲಿ ಪಕ್ಷ ಸಂಘಟನೆ ಬಲಪಡಿಸಲು ನಿರ್ಧರಿಸಿದೆ. ಜನರೊಂದಿಗೆ ಜನತಾದಳದ ಮೂಲಕ ತವರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೇಲುಗೈ ಸಾಧಿಸಲು ಯೋಜನೆ ರೂಪಿಸಿದೆ. ಉಳಿದಂತೆ ತಾಲ್ಲೂಕು ಪಂಚಾಯಿತಿ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲೂ ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸಲು ಸ್ವತಃ ಎಚ್.ಡಿ. ದೇವೇಗೌಡರೇ ಜಿಲ್ಲೆಗೆ ಬರುತ್ತಿದ್ದು ಪಕ್ಷದ ಉತ್ಸಾಹವನ್ನು ಇಮ್ಮಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.