ಹಾಸನ: ನಗರದಲ್ಲಿ ಅಡುಗೆ ಅನಿಲ ಸಿಲಿಂಡರ್ ಕೊರತೆ ಉಂಟಾಗಿದೆ ಎಂಬ ವದಂತಿಗಳ ಹಿನ್ನೆಲೆಯಲ್ಲಿ ಗ್ರಾಹಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಹಲವರು ಗ್ಯಾಸ್ ವಿತರಣಾ ಕೇಂದ್ರಗಳಿಗೆ ಮುಗಿಬಿದ್ದು ಹೆಚ್ಚುವರಿ ಸಿಲಿಂಡರ್ಗಳನ್ನು ಬುಕ್ ಮಾಡುತ್ತಿರುವ ಘಟನೆ ಕಂಡುಬಂದವು.

ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಸಿಗುವುದಿಲ್ಲ ಎಂಬ ಭೀತಿಯಿಂದ ಹಲವಾರು ಗ್ರಾಹಕರು ಹೆಚ್ಚುವರಿಯಾಗಿ ಸಿಲಿಂಡರ್ ಬುಕ್ಕಿಂಗ್ ಮಾಡುತ್ತಿದ್ದಾರೆ. ಗೃಹ ಬಳಕೆಯ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಆತಂಕದಿಂದ ಮುಂಚಿತವಾಗಿ ಬುಕ್ಕಿಂಗ್ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂದು ವಿತರಕರು ತಿಳಿಸಿದ್ದಾರೆ.

ಗೃಹ ಬಳಕೆಯ ಸಿಲಿಂಡರ್ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗಿಲ್ಲ. ನಿತ್ಯದ ಗೃಹ ಬಳಕೆಯ ಸಿಲಿಂಡರ್ ನಿಯಮಿತವಾಗಿ ಪೂರೈಕೆ ಆಗುತ್ತಿದ್ದು, ಸಾರ್ವಜನಿಕರು ಆತಂಕ ಪಡಬೇಕಾದ ಪರಿಸ್ಥಿತಿ ಇಲ್ಲ ಎಂದು ಹೇಳಿದ್ದಾರೆ.

ಆದರೆ ವಾಣಿಜ್ಯ ಬಳಕೆಯ ಸಿಲಿಂಡರ್ ಪೂರೈಕೆಯಲ್ಲಿ ಮಾತ್ರ ಸ್ವಲ್ಪ ವ್ಯತ್ಯಯ ಉಂಟಾಗಿದ್ದು, ಕೆಲವು ಕಡೆ ಕೊರತೆ ಕಾಣಿಸಿಕೊಂಡಿದೆ. ಹೋಟೆಲ್ಗಳು, ಸಿಹಿತಿಂಡಿ ತಯಾರಿಕಾ ಅಂಗಡಿಗಳು ಹಾಗೂ ಇತರೆ ವಾಣಿಜ್ಯ ಬಳಕೆದಾರರಿಗೆ ಸರಬರಾಜಿನಲ್ಲಿ ತಾತ್ಕಾಲಿಕ ತೊಂದರೆ ಉಂಟಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸರ್ಕಾರದ ನಿರ್ದೇಶನದಂತೆ ಸಿಲಿಂಡರ್ ಪೂರೈಕೆ ಕ್ರಮಬದ್ಧವಾಗಿ ಮುಂದುವರಿಯುತ್ತಿದೆ. ಆದ್ದರಿಂದ ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೇ ಅನಗತ್ಯವಾಗಿ ಹೆಚ್ಚುವರಿ ಸಿಲಿಂಡರ್ ಬುಕ್ ಮಾಡಬಾರದು ಎಂದು ವಿತರಕರು ಮನವಿ ಮಾಡಿದ್ದಾರೆ.

ಸಾರ್ವಜನಿಕರು ಗೊಂದಲಕ್ಕೆ ಒಳಗಾಗದೇ ಅಗತ್ಯವಿರುವಷ್ಟೇ ಸಿಲಿಂಡರ್ ಬುಕ್ ಮಾಡುವುದು ಸೂಕ್ತ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.