ಹಾಸನ: ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಮಡಿವಾಳರ ಕ್ಷೇಮಾಭಿವೃದ್ಧಿ ಸಂಘ, ಉತ್ತರ ಕರ್ನಾಟಕ ಮಡಿವಾಳರ ಸಂಘದ ವತಿಯಿಂದ ಮಾರ್ಚ್ 16 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಂಘದ ಮುಖಂಡ ರವಿಕುಮಾರ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗದ ಮಾಚಿದೇವ ಮಹಾಸಂಸ್ಥಾನ ಮಠದ ಜಗದ್ಗುರು ಬಸವ ಮಾಚಿದೇವ ಸ್ವಾಮೀಜಿ ಹಾಗೂ ಮೂಡುಬಿದಿರೆ ಕರಿಂಜೆ ಕ್ಷೇತ್ರದ ಮುಕ್ತಾನಂದ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ ಎಂದರು.

ಮಡಿವಾಳ ಸಮಾಜವು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದ್ದು, ಹಲವು ದಶಕಗಳಿಂದ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕೆಂಬ ಬೇಡಿಕೆ ಮುಂದುವರಿದಿದ್ದರೂ ಸರ್ಕಾರಗಳು ಇದುವರೆಗೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಮಡಿವಾಳ ಸಮುದಾಯದವರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸರ್ಕಾರಿ ನೌಕರರು, ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿ ಸಮಾಜದ ಹಕ್ಕಿಗಾಗಿ ಧ್ವನಿಯಾಗಬೇಕು ಎಂದು ಮನವಿ ಮಾಡಿದರು. ಕುಮಾರ್, ಚಂದ್ರು, ಮಲ್ಲೇಶ್, ಜಯಣ್ಣ, ರೋಹಿತ್, ಸೊಮ್ಮಣ್ಣ, ರಘು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260316-36-1314843972

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.