ಹಾಸನ: ಮೊಸಳೆಹೊಸಳ್ಳಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ‘ಮಕರೋತ್ಸವ 2026’ ಕಾರ್ಯಕ್ರಮ ನಡೆಯಿತು. ಕಾಲೇಜಿನಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಮುಖ್ಯ ಅತಿಥಿಯಾಗಿದ್ದ ನಿವೃತ್ತ ಪ್ರಾಂಶುಪಾಲ ಡಾ. ಇರ್ಷಾದ್ ಎಂ.ಬಿ. ಮಾತನಾಡಿ, ‘ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಗುರಿ ತಲುಪುವ ನಿಟ್ಟಿನಲ್ಲಿ ಸತತ ಪರಿಶ್ರಮದಿಂದ ಮುನ್ನಡೆಯಬೇಕು. ಬರುವ ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸಬೇಕು’ ಎಂದು ಹೇಳಿದರು.

ನಿವೃತ್ತ ಪ್ರಾಂಶುಪಾಲ ಡಾ.ವೆಂಕಟೇಶ್ ಬಿ. ಮಾತನಾಡಿ, ‘ವಿದ್ಯಾರ್ಥಿಗಳು ಶಿಸ್ತಿನ ಸಿಪಾಯಿಗಳಾಗಬೇಕು. ಒಳ್ಳೆಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಅದು ಅವರನ್ನು ತಲುಪಬೇಕಾದ ಹಾದಿಗೆ ತಲುಪಿಸುತ್ತದೆ’ ಎಂದರು.

ನಿವೃತ್ತ ಪ್ರಾಂಶುಪಾಲ ಡಾ.ಪ್ರಶಾಂತ್ ಮಾತನಾಡಿ, ‘ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮತ್ತು ಸಂಯಮ ಅಗತ್ಯ. ಈ ಕ್ಷಣ ಬಹಳ ಅಮೂಲ್ಯವಾದದ್ದು. ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು’ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ.ಟಿ.ರಂಗಸ್ವಾಮಿ ಮಾತನಾಡಿ, ‘ವಿದ್ಯಾರ್ಥಿಗಳು ಕೌಶಲ ಹಾಗೂ ಪ್ರತಿಭೆಗಳನ್ನು ಅನಾವರಣ ಮಾಡಿಕೊಂಡು ಜೀವನದಲ್ಲಿ ಉತ್ತಮ ಸ್ಥಾನಕ್ಕೆ ಏರಬೇಕು. ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕವಾಗಿ ಅಲ್ಲದೆ ಎಲ್ಲ ಕ್ಷೇತ್ರಗಳಲ್ಲೂ ತೊಡಗಿಸಿಕೊಳ್ಳಬೇಕು’ ಎಂದು ಹೇಳಿದರು.

ಸಿವಿಲ್ ವಿಭಾಗದ ಡಾ.ಪ್ರವೀಣ್ ವಾರ್ಷಿಕ ವರದಿ ಪ್ರಸ್ತುತಪಡಿಸಿದರು. ಸಂಸ್ಥೆಯ ಎಲ್ಲ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-36-813595102

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.