ಹಾಸನ: ನಗರದ ಮಲೆನಾಡು ತಾಂತ್ರಿಕ ಶಿಕ್ಷಣ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಬಿ.ಆರ್. ಗುರುದೇವ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಜಿ.ಟಿ. ಕುಮಾರ್ ಶನಿವಾರ ಅಧಿಕಾರ ವಹಿಸಿಕೊಂಡರು.

ನಗರದ ಸಂಸ್ಥೆಯ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಿತು. ಸಹ ಕಾರ್ಯದರ್ಶಿಯಾಗಿ ಜಿ.ಆರ್. ಶ್ರೀನಿವಾಸ್ ಹಾಗೂ ಖಜಾಂಚಿಯಾಗಿ ಎಸ್.ಜಿ. ಶ್ರೀಧರ್ ಅಧಿಕಾರ ಸ್ವೀಕರಿಸಿದರು.

ಸಮಾರಂಭದಲ್ಲಿ ಸಂಸ್ಥೆಯ ಮಾಜಿ ಅಧ್ಯಕ್ಷ ಆಶೋಕ್ ಹಾರನಹಳ್ಳಿ, ನಿರ್ದೇಶಕರಾದ ಕೆ.ಎಂ. ಶಿವಣ್ಣ, ಡಾ. ಅರವಿಂದ್, ಬೂವನಹಳ್ಳಿ ಶ್ರೀನಿವಾಸ್, ಕೆ.ಎನ್. ಗುರುಪ್ಪ, ಎಚ್. ಸುರೇಶ, ಕೆ. ಪ್ರಭಾಕರ್, ಮಾಜಿ ಕಾರ್ಯದರ್ಶಿ ಬಿ.ಕೆ. ಮಂಜುನಾಥ್, ರವಿ ನಾಕಲಗೂಡು ಸೇರಿದಂತೆ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಹಿತೈಷಿಗಳು ಉಪಸ್ಥಿತರಿದ್ದರು.

ಬಳಿಕ ನೂತನ ಅಧ್ಯಕ್ಷ ಬಿ.ಆರ್. ಗುರುದೇವ್ ಹಾಗೂ ಪದಾಧಿಕಾರಿಗಳು, ಮಲೆನಾಡು ಎಂಜಿನಿಯರಿಂಗ್ ಕಾಲೇಜು ಸೇರಿದಂತೆ ಸಂಸ್ಥೆಯ ವ್ಯಾಪ್ತಿಗೆ ಒಳಪಡುವ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಸಂಸ್ಥೆಯು ಮಲೆನಾಡು ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಸೇರಿದಂತೆ ಹಲವು ವಿದ್ಯಾ ಸಂಸ್ಥೆಗಳನ್ನು ಹೊಂದಿದ್ದು, ಸಾವಿರಾರು ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣ ನೀಡುತ್ತಿದೆ. ನೂತನ ಆಡಳಿತ ಮಂಡಳಿಯಿಂದ ಸಂಸ್ಥೆಯ ಸರ್ವತೋಮುಖ ಅಭಿವೃದ್ಧಿಯಾಗಲಿ ಎಂದು ಹಾಜರಿದ್ದ ಗಣ್ಯರು ಶುಭ ಹಾರೈಸಿದರು.

ಕಳೆದ ಹಲವು ತಿಂಗಳಿಂದ ಮಲೆನಾಡು ತಾಂತ್ರಿಕ ಶಿಕ್ಷಣ ಸಮಿತಿಯ ಆಡಳಿತ ಮಂಡಳಿಯಲ್ಲಿ ಅಧಿಕಾರಕ್ಕಾಗಿ ನಡೆಯುತ್ತಿದ್ದ ಜಟಾಪಟಿಗೆ ಹೈಕೋಟ್ ತೆರೆ ಎಳೆದಿದ್ದು, ಹೈಕೋರ್ಟ್ ಆದೇಶದ ಅನ್ವಯ ನೂತನ ಆಡಳಿತ ಮಂಡಳಿ ಅಧಿಕಾರ ಸ್ವೀಕರಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-36-596506922

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.