ಹಾಸನ: ‘ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಇದರಿಂದಾಗಿ ವರ್ಷದಿಂದ ಮಲೆನಾಡು ತಾಂತ್ರಿಕ ಶಿಕ್ಷಣ ಸಂಸ್ಥೆಯ ವಿಚಾರದಲ್ಲಿ ನಡೆಯುತ್ತಿದ್ದ ಆಡಳಿತಾತ್ಮಕ ಗೊಂದಲ, ಪರಸ್ಪರ ಆರೋಪ–ಪ್ರತ್ಯಾರೋಪ ಹಾಗೂ ಕಾನೂನು ಹೋರಾಟಗಳಿಗೆ ಗೊಂದಲಕ್ಕೆ ತೆರೆ ಬಿದ್ದಿದೆ’ ಎಂದು ಸಂಸ್ಥೆಯ ಅಧ್ಯಕ್ಷ ಬಿ.ಆರ್. ಗುರುದೇವ್ ತಿಳಿಸಿದರು.

ನಗರದ ಸಂಸ್ಥೆಯ ಸಭಾಂಗಣದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂಸ್ಥೆಯ ಯಾವುದೇ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲು ಕಾರ್ಯಕಾರಿ ಸಮಿತಿಯೇ ಪರಮಾಧಿಕಾರ ಹೊಂದಿರುವಂತೆ ಬೈಲಾ ರೂಪಿಸಲಾಗಿದೆ. ಆದರೆ, ಹಿಂದಿನ ಅಧ್ಯಕ್ಷ ಆರ್.ಟಿ. ದ್ಯಾವೇಗೌಡ ಹಾಗೂ ಕಾರ್ಯದರ್ಶಿ ಜಗದೀಶ್ ಚೌಡುವಳ್ಳಿ ಅವರ ಏಕಪಕ್ಷೀಯ ನಿರ್ಧಾರಗಳು ಮತ್ತು ದುರಾಡಳಿತದಿಂದ ಸಂಸ್ಥೆಯ ಆಡಳಿತ ವ್ಯವಸ್ಥೆ ಹದಗೆಟ್ಟಿದೆ’ ಎಂದು ಆರೋಪಿಸಿದರು.

‘ನಮ್ಮ ಪರ 14 ಮಂದಿ ನಿರ್ದೇಶಕರ ಬೆಂಬಲವಿದ್ದರೂ, ಕೇವಲ 10 ಮಂದಿ ನಿರ್ದೇಶಕರು ಕೈಗೊಂಡ ನಿರ್ಧಾರಗಳಿಂದ ಸಂಸ್ಥೆಯಲ್ಲಿ ಗೊಂದಲ ಸೃಷ್ಟಿಯಾಯಿತು. ಹೈಕೋರ್ಟ್ ತೀರ್ಪನ್ನು ಒಪ್ಪದೇ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲಾಗಿತ್ತು. ಇದೀಗ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿರುವುದು ಸಂಸ್ಥೆಯ ಸುಸೂತ್ರ ಆಡಳಿತಕ್ಕೆ ದಾರಿಯಾಗಿದೆ’ ಎಂದರು.

ಬಾಡಿಗೆ ಕಟ್ಟದವರಿಗೆ ₹90 ಲಕ್ಷ ಚೆಕ್: ‘ಎವಿಕೆ ಕಾಲೇಜಿನ ಪಕ್ಕದಲ್ಲಿರುವ ವಾಣಿಜ್ಯ ಸಂಕೀರ್ಣದ ಮಳಿಗೆಗಳನ್ನು ಬಾಡಿಗೆಗೆ ಪಡೆದಿದ್ದ ಕುಮಾರ್ ಎಂಬುವವರು ಸುಮಾರು ₹2.5 ಕೋಟಿ ಬಾಡಿಗೆಯನ್ನು ಸಂಸ್ಥೆಗೆ ಪಾವತಿಸಬೇಕಿದೆ. ಆದರೂ, ಹಿಂದಿನ ಆಡಳಿತ ಮಂಡಳಿ ಅವರಿಗೇ ₹90 ಲಕ್ಷದ ಚೆಕ್ ನೀಡಿರುವುದು ಕಾನೂನುಬಾಹಿರ’ ಎಂದು ಹೇಳಿದರು.

‘ಖಜಾಂಚಿ ಪಾರ್ಶ್ವನಾಥ್ ವಿದೇಶದಲ್ಲಿದ್ದ ವೇಳೆ, ರಾಜಶೇಖರ್ ಅವರನ್ನು ನಿರ್ದೇಶಕರನ್ನಾಗಿ ನೇಮಿಸಿ, ₹70 ಲಕ್ಷಕ್ಕೂ ಅಧಿಕ ಹಣವನ್ನು ಖಾತೆಯಿಂದ ಎತ್ತುವಳಿ ಮಾಡಲಾಗಿದೆ. ಇದಕ್ಕೂ ಕಾರ್ಯಕಾರಿ ಸಮಿತಿಯ ಅನುಮತಿ ಪಡೆದಿಲ್ಲ’ ಎಂದು ದೂರಿದರು.

ಮಾಜಿ ಅಧ್ಯಕ್ಷ ಅಶೋಕ್ ಹಾರನಹಳ್ಳಿ ಮಾತನಾಡಿ, ‘ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ ಮತ್ತು ಸಂಶೋಧನಾ ಚಟುವಟಿಕೆಗಳಿಗೆ ಆದ್ಯತೆ ನೀಡಲಾಗುತ್ತದೆ. ಐಐಟಿ ಸಂಪನ್ಮೂಲ ವ್ಯಕ್ತಿಗಳ ಮೂಲಕ ಗುಣಮಟ್ಟದ ಶಿಕ್ಷಣ ಒದಗಿಸುವ ಜೊತೆಗೆ ಸಂಶೋಧನಾ ಕೇಂದ್ರ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

‘2025ರಿಂದ ಈಚೆಗೆ ಸುಮಾರು 14 ಸಿಬ್ಬಂದಿಗೆ ಹುದ್ದೆಗಳೇ ಇಲ್ಲದಿದ್ದರೂ ಪದೋನ್ನತಿ ನೀಡಲಾಗಿದೆ. ಅದರಿಂದ ಸಿಬ್ಬಂದಿ ಮತ್ತು ನೌಕರರ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ. ನೇಮಕಾತಿ ಹಾಗೂ ಬಡ್ತಿ ವಿಚಾರದಲ್ಲಿ ಹಿಂದಿನ ಆಡಳಿತ ಮಂಡಳಿ ತೆಗೆದುಕೊಂಡ ತಪ್ಪು ನಿರ್ಧಾರಗಳನ್ನು ಸರಿಪಡಿಸಲಾಗುವುದು’ ಎಂದು ಭರವಸೆ ನೀಡಿದರು.

ನಿರ್ದೇಶಕ ಜಿ.ಟಿ. ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-36-1734610010

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.