ಹಾಸನ: ನಗರದ ಮಲೆನಾಡು ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೇ 8ರಿಂದ 10ರವರೆಗೆ ನಡೆದ ‘ಮಲ್ನಾಡ್ ಫೆಸ್ಟ್-2026’ ವಾರ್ಷಿಕೋತ್ಸವವು ವಿವಿಧ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.

ಕಾಲೇಜಿನ ಎಲ್ಲ ವಿಭಾಗಗಳ ಸುಮಾರು ನಾಲ್ಕು ಸಾವಿರ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳು ನೃತ್ಯ, ಸಂಗೀತ, ನಾಟಕ ಸೇರಿದಂತೆ ವಿವಿಧ ಕಲಾ ಪ್ರತಿಭೆಗಳನ್ನು ಪ್ರದರ್ಶಿಸಿದರು. ಇಡೀ ಕಾಲೇಜು ಆವರಣವನ್ನು ತೋರಣಗಳು, ಕಲಾಕೃತಿಗಳಿಂದ ಸಿಂಗರಿಸಲಾಗಿತ್ತು.

ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಎಐಎಂಎಲ್ ಹಾಗೂ ಸಿಎಸ್ಬಿಎಸ್ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಬಹುಮಾನದ ಟ್ರೋಫಿ ಪಡೆದು ಸಂಭ್ರಮಿಸಿದರು. ಕಂಪ್ಯೂಟರ್ ಸೈನ್ಸ್ ವಿಭಾಗ ದ್ವಿತೀಯ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗ ತೃತೀಯ ಬಹುಮಾನ ಪಡೆದುಕೊಂಡವು.

ಭಾನುವಾರ ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಿ ಮಾತನಾಡಿದ ಪ್ರಾಂಶುಪಾಲ ಡಾ.ಎಚ್.ಜೆ. ಅಮರೇಂದ್ರ, ‘ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಸ್ಪೂರ್ತಿ ನೀಡುತ್ತವೆ. ವರ್ಷದ ಕೊನೆಯಲ್ಲಿ ವಾರ್ಷಿಕೋತ್ಸವ ಆಚರಿಸುವ ಮೂಲಕ ವಿದ್ಯಾರ್ಥಿಗಳು ತಮ್ಮ ಕಲಾ ಪ್ರತಿಭೆಯನ್ನು ಪ್ರದರ್ಶಿಸಿರುವುದು ಶ್ಲಾಘನೀಯ’ ಎಂದರು.

‘ವ್ಯಾಸಂಗದ ಜೊತೆಗೆ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳು ಹಾಗೂ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರತಿಭೆ ತೋರಿದ ಎಲ್ಲ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ಹಾಗೂ ಕಾಲೇಜಿನ ಪರವಾಗಿ ಶುಭಾಶಯ ಕೋರುತ್ತೇನೆ. ಪ್ರತಿ ವರ್ಷವೂ ಮೂರು ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯುತ್ತವೆ. ಹಿರಿಯ ವಿದ್ಯಾರ್ಥಿಗಳು, ಎಲ್ಲ ಕ್ಲಬ್ಗಳ ವಿದ್ಯಾರ್ಥಿಗಳು, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹೆಚ್ಚಿನ ಜವಾಬ್ದಾರಿ ತೆಗೆದುಕೊಂಡು ಕಾರ್ಯಕ್ರಮ ಯಶಸ್ವಿಗೊಳಿಸುತ್ತಿರುವುದು ನಮ್ಮೆಲ್ಲರಿಗೂ ಗೌರವ ತಂದಿದೆ’ ಎಂದು ಹೇಳಿದರು.

‘ಸುಮಾರು ನಾಲ್ಕು ಸಾವಿರ ವಿದ್ಯಾರ್ಥಿಗಳು, 500 ನೌಕರರು ನಮ್ಮ ಕಾಲೇಜಿನಲ್ಲಿದ್ದು, ಎಲ್ಲರೂ ಈ ಮೂರು ದಿನಗಳ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಹಬ್ಬದಂತೆ ಆಚರಿಸುತ್ತಾರೆ. ಇಂತಹ ಕಾರ್ಯಕ್ರಮಗಳಿಂದ ಕಾಲೇಜಿಗೆ ಹೆಚ್ಚಿನ ಗೌರವ ಲಭಿಸುತ್ತದೆ’ ಎಂದರು.

ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ.ಇಂದಿರಾ ಬಹದ್ದೂರ್, ಸಹ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ.ಶಿವಶಂಕರ್, ಕಾರ್ಯಕ್ರಮ ಸಂಯೋಜಕ, ಪ್ರಾಧ್ಯಾಪಕರಾದ ಡಾ. ಮಾರ್ಗರೇಟ್, ಡಾ. ಜೀವನ್, ಡಾ.ಶರತ್, ಡಾ.ಸುಮನಾ ಜಯಪ್ರಕಾಶ್, ಡಾ. ಹರೀಶ್, ಪ್ರೊ.ಬಿ.ಬಿ. ನೀಲಕಂಠಪ್ಪ, ಸಂಸ್ಥೆಯ ಮಾಧ್ಯಮ ಸಂಯೋಜಕ ಕಟ್ಟಾಯ ಶಿವಕುಮಾರ್, ಮದಕರಿ ನಾಯಕ್, ಕಿರಣ್ ಸೇರಿದಂತೆ ವಿವಿಧ ಸಮಿತಿಗಳ ಸದಸ್ಯರು, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಎಲ್ಲ ಕ್ಲಬ್ಗಳ ಸದಸ್ಯರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-36-2050373175

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.