ಹಾಸನ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪದವಿ ವಿದ್ಯಾರ್ಥಿ ಸಾಗರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪರಿಚಿತಳಾಗಿದ್ದ ಬಾಲಕಿಗೆ ಮನೆಗೆ ಡ್ರಾಪ್ ನೀಡುವುದಾಗಿ ಹೇಳಿ ಬೈಕ್ನಲ್ಲಿ ಕರೆದೊಯ್ದ ಆರೋಪಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೃತ್ಯದ ನಂತರ ವಿಷಯವನ್ನು ಯಾರಿಗಾದರೂ ತಿಳಿಸಿದರೆ, ಕೊಲೆ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದನು. ನಂತರ ಬೈಕ್ನಲ್ಲಿ ವಾಪಸ್ ಬರುತ್ತಿದ್ದ ವೇಳೆ ಭಯಭೀತಳಾದ ಬಾಲಕಿ ಚಲಿಸುತ್ತಿದ್ದ ಬೈಕ್ನಿಂದ ಜಿಗಿದಿದ್ದಳು. ಸುಸ್ತಾಗಿದ್ದ ಬಾಲಕಿಯನ್ನು ತಾಯಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿನ ಸಖಿ ಕೇಂದ್ರದಲ್ಲಿ ದಾಖಲಿಸಲಾಗಿದೆ. ಬಾಲಕಿ ಹಾಗೂ ತಾಯಿ ನೀಡಿದ ಹೇಳಿಕೆ ಆಧರಿಸಿ ಹಾಸನ ಮಹಿಳಾ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪ್ರಕರಣದಲ್ಲಿ ಇನ್ನಿಬ್ಬರು ಯುವಕರ ಪಾತ್ರವಿರುವ ಶಂಕೆ ವ್ಯಕ್ತವಾಗಿದ್ದು, ಅವರ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಆರೋಪಿಗಳ ವಿರುದ್ಧ ಸಂಬಂಧಿತ ಕಾನೂನು ವಿಧಿಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-36-21161612

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.