ಹಾಸನ: ತಾಲ್ಲೂಕು ಮಟ್ಟದ ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತರು ಮತ್ತು ಸಾರ್ವಜನಿಕರ ಕೆಲಸಗಳು ವಿಳಂಬವಾಗುತ್ತಿದ್ದು, ಇಂತಹ ಬೇಜವಾಬ್ದಾರಿ ನಡೆ ಸಹಿಸಲಾಗುವುದಿಲ್ಲ ಎಂದು ಶಾಸಕ ಎಚ್.ಡಿ. ರೇವಣ್ಣ ಹೇಳಿದರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಭೂಮಾಫಿಯಾ ಹಾಗೂ ಕ್ರಷರ್ ಅಕ್ರಮಗಳಿಗೆ ಅಧಿಕಾರಿಗಳು ಸಹಕಾರ ನೀಡುತ್ತಿರುವ ಆರೋಪವೂ ಕೇಳಿಬರುತ್ತಿದ್ದು, ಇದನ್ನು ಯಾವ ಕಾರಣಕ್ಕೂ ಸಹಿಸಲ್ಲ ಎಂದು ಎಚ್ಚರಿಕೆ ನೀಡಿದರು.

ತಾಲ್ಲೂಕು ಮಟ್ಟದ ಅಧಿಕಾರಿಗಳು ಬಹುತೇಕ ಜಿಲ್ಲಾಧಿಕಾರಿ ಕಚೇರಿಯಲ್ಲೇ ಕಾಲ ಕಳೆಯುತ್ತಿರುವುದರಿಂದ ಗ್ರಾಮ ಮಟ್ಟದಲ್ಲಿ ಸಮಸ್ಯೆಗಳು ಬಗೆಹರಿಯದೇ ಉಳಿಯುತ್ತಿವೆ. ಮೊದಲು ಕಂದಾಯ ಇಲಾಖೆಯಲ್ಲಿನ ಸಮಸ್ಯೆಗಳನ್ನು ಪರಿಹರಿಸಿ, ನಂತರ ಇತರೆ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಗಳನ್ನು ನಡೆಸಬೇಕು ಎಂದು ಜಿಲ್ಲಾಧಿಕಾರಿಗೆ ಸಲಹೆ ನೀಡಿದರು.

ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 3ಸಾವಿರಕ್ಕೂ ಹೆಚ್ಚು ಖಾತೆ ದುರಸ್ತಿ ಅರ್ಜಿಗಳು ಬಾಕಿ ಉಳಿದಿವೆ. ದಂಡಿಗನಹಳ್ಳಿ ವ್ಯಾಪ್ತಿಯಲ್ಲಿ 1,200 ಅರ್ಜಿಗಳು ಸಲ್ಲಿಕೆಯಾಗಿದ್ದು, ಬಾಕಿಯಾಗಿದೆ. ಕೊರವಂಗಲ ಕಾವಲು ಪ್ರದೇಶದಲ್ಲಿ ಸುಮಾರು 200 ಮಂದಿ ಅರ್ಜಿ ಸಲ್ಲಿಸಿದ್ದರೂ ಕ್ರಮ ಕೈಗೊಳ್ಳಲಾಗಿಲ್ಲ. ಉದ್ದೂರು ಗ್ರಾಮದಲ್ಲಿ 24 ವರ್ಷಗಳಿಂದ ಮನೆ ನಿರ್ಮಿಸಿಕೊಂಡು ವಾಸವಾಗಿರುವವರಿಗೂ ಖಾತೆ ಮಾಡಿಕೊಡಲಾಗಿಲ್ಲ. ರಾಗಿಮುದ್ದೆನಹಳ್ಳಿಯಲ್ಲಿ 40 ವರ್ಷಗಳಿಂದ ಭೂ ಅನುಭವದಲ್ಲಿರುವ 24 ಮನೆಗಳಿಗೆ ಇನ್ನೂ ಖಾತೆ ನೀಡದಿರುವುದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಪಷ್ಟ ಉದಾಹರಣೆ ಎಂದು ದೂರಿದರು.

ಭೂಸ್ವಾಧೀನ ವಿಳಂಬಕ್ಕೆ ಅಸಮಾಧಾನ: ಹಾಸನ–ಚಿಕ್ಕಮಗಳೂರು ರೈಲ್ವೆ ಮಾರ್ಗದ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ತೀವ್ರ ವಿಳಂಬವಾಗುತ್ತಿರುವುದನ್ನು ಖಂಡಿಸಿದ ರೇವಣ್ಣ, ಕೇವಲ 5.21 ಎಕರೆ ಭೂ ಸ್ವಾಧೀನ ಹಾಗೂ ಪರಿಹಾರ ವಿತರಣೆಗೆ ಎಂಟು ವರ್ಷಗಳಾಗಿರುವುದು ದುರಂತವೇ ಸರಿ ಎಂದು ಟೀಕಿಸಿದರು.

ಜಿಲ್ಲಾಧಿಕಾರಿ ಇತರೆ ಇಲಾಖೆಗಳ ಸಭೆಗಳಲ್ಲಿ ತೊಡಗಿಕೊಂಡಿರುವುದರಿಂದ ಪ್ರಮುಖ ಸಮಸ್ಯೆಗಳು ಬಗೆಹರಿಯುತ್ತಿಲ್ಲ. ಈ ಬಗ್ಗೆ ಮುಖ್ಯ ಕಾರ್ಯದರ್ಶಿಗಳಿಗೆ ದೂರು ನೀಡುವುದಾಗಿ ಎಚ್ಚರಿಸಿದರು.

ಹಾಸನ–ಚಿಕ್ಕಮಗಳೂರು ರೈಲ್ವೆ ಮಾರ್ಗ ಹಾಗೂ ಹಾಸನ–ಬೇಲೂರು ನಾಲ್ಕು ಪಥದ ರಸ್ತೆ ಕಾಮಗಾರಿಗಳ ವಿಳಂಬದಿಂದ ಕೇಂದ್ರ ಸರ್ಕಾರದ ಅನುದಾನವನ್ನು ಸಮಯಕ್ಕೆ ಬಳಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಜೂನ್ ವೇಳೆಗೆ ಈ ಅನುದಾನ ಬಳಸಿಕೊಳ್ಳಲು ಅವಕಾಶ ಇರುವುದರಿಂದ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ರೈತರ ಸಮಸ್ಯೆಗಳಿಗೆ ಸ್ಪಂದನೆ ಅಗತ್ಯ: ಅಧಿಕಾರಿಗಳು ತಮ್ಮ ಕಚೇರಿ ಕೆಲಸಗಳನ್ನು ಬದಿಗಿಟ್ಟು ದಿನಪೂರ್ತಿ ಸಭೆಗಳಲ್ಲಿ ತೊಡಗಿಕೊಂಡರೆ, ರೈತರ ಸಮಸ್ಯೆಗಳನ್ನು ಕೇಳುವವರು ಯಾರು ಎಂದು ಪ್ರಶ್ನಿಸಿದ ಅವರು, ರೈತರು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಮುಂದುವರಿದಿದೆ ಎಂದು ಕಿಡಿಕಾರಿದರು.

ಭೂಸ್ವಾಧೀನ ಪರಿಹಾರ ವಿಳಂಬ, ಅರಣ್ಯ ಇಲಾಖೆಯಿಂದ ಕಿರುಕುಳ, ಅನುದಾನ ಮತ್ತು ಪರಿಹಾರ ವಿತರಣೆಯಲ್ಲಿ ಲೋಪ ಸೇರಿದಂತೆ ಹಲವು ಸಮಸ್ಯೆಗಳು ರೈತರಿಗೆ ತೊಂದರೆಯಾಗುತ್ತಿವೆ ಎಂದು ಹೇಳಿದರು.

ಕಾನೂನುಬಾಹಿರ ಕೆಲಸಗಳನ್ನು ಯಾವುದೇ ಕಾರಣಕ್ಕೂ ಮಾಡಬಾರದು. 30 ವರ್ಷಗಳಿಂದ ಶಾಸಕನಾಗಿ ಕೆಲಸ ಮಾಡುತ್ತಿದ್ದೇನೆ. ಅಧಿಕಾರಿಗಳಿಗೆ ಜನರ ಕೆಲಸದಲ್ಲಿ ನಿರ್ಲಕ್ಷ್ಯ ಮನೋಭಾವ ಇರಬಾರದು ಎಂದು ತಾಕೀತು ಮಾಡಿದರು.

ಸರ್ವೇಯರ್ಗಳು ದುರಸ್ತಿ ಕೆಲಸಗಳನ್ನು ನಿರ್ಲಕ್ಷ್ಯ ಮಾಡುತ್ತಿರುವ ದೂರುಗಳು ಇದೆ. ಜನಸ್ಪಂದನ ಸಭೆಗಳಲ್ಲಿ ರೈತರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಮಾತ್ರ ಬರುತ್ತಿದ್ದು, ಅವುಗಳಿಗೆ ಪರಿಹಾರ ಸಿಗುತ್ತಿಲ್ಲ. ಇಂದು ಸಭೆಯಲ್ಲಿ ಪ್ರಸ್ತಾಪಿಸಿದ ಎಲ್ಲ ಸಮಸ್ಯೆಗಳನ್ನು 15 ದಿನಗಳೊಳಗೆ ಬಗೆಹರಿಸಬೇಕು ಎಂದು ಗಡುವು ನೀಡಿದ್ದೇನೆ ಎಂದು ರೇವಣ್ಣ ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-36-1030728618

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.