ಹಾಸನ: ಹಾಸನಾಂಬ ಜಿಲ್ಲಾ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ‘ಪತ್ರಿಕಾ ವಿತರಕರ ಪ್ರೀಮಿಯರ್ ಲೀಗ್’ ಕ್ರೀಡಾಕೂಟವನ್ನು ಮೇ 31ರ ಭಾನುವಾರ ನಗರದ ಸರ್ಕಾರಿ ಕಲಾ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಚೇತನ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಎಚ್.ಪಿ. ಸ್ವರೂಪ್ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಎಚ್.ಬಿ. ಮದನ ಗೌಡ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ ಎಂದರು

ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜೆ.ಆರ್. ಕೆಂಚೇಗೌಡ, ಮಾಜಿ ಅಧ್ಯಕ್ಷರಾದ ಬಾಳ್ಳು ಗೋಪಾಲ್, ರವಿ ನಾಕಲಗೂಡು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ. ಗೌಡ ಹಾಗೂ ಕಾರ್ಮಿಕ ನಿರೀಕ್ಷಕ ಆನಂದ್ ರಾಮ್ ಅವರು ಪತ್ರಿಕಾ ವಿತರಕರನ್ನು ಸನ್ಮಾನಿಸಲಿದ್ದಾರೆ. ಜೆಸಿಬಿ ಚಂದ್ರು, ಪ್ರಜಾವಾಣಿ, ಜನಮಿತ್ರ, ಜನತಾ ಮಾಧ್ಯಮ, ಹಲೋಹಾಸನ್ ಪತ್ರಿಕೆಯವರು ಬಹುಮಾನದ ನೆರವು ನೀಡಿದ್ದಾರೆ ಎಂದು ತಿಳಿಸಿದರು.

ಕ್ರೀಡಾಕೂಟದಲ್ಲಿ ಪ್ರಥಮ ಬಹುಮಾನ ₹20 ಸಾವಿರ, ದ್ವಿತೀಯ ಬಹುಮಾನ ₹15 ಸಾವಿರ, ತೃತೀಯ ಮತ್ತು ನಾಲ್ಕನೇ ಬಹುಮಾನ ತಲಾ ₹10 ಸಾವಿರ ಹಾಗೂ ಐದನೇ ಬಹುಮಾನ ₹5 ಸಾವಿರ ನಿಗದಿಪಡಿಸಲಾಗಿದೆ ಎಂದರು. ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್ ಪ್ರಶಸ್ತಿ ಮತ್ತು ಪದಕಗಳನ್ನು ನೀಡಿದ್ದು. ಪುನೀತ್ ರಾಜಕುಮಾರ್ ಅಭಿಮಾನಿ ಗೌರಿಕುಮಾರ್ ಉಪಹಾರ ಮತ್ತು ಊಟದ ವ್ಯವಸ್ಥೆ ಮಾಡಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ವಿತರಕರ ಸಂಘದ ಸುನಿಲ್, ಸುರೇಶ್, ಕಿರಣ್ ,ಶ್ರೀಕಾಂತ ,ದಿನೇಶ್ ,ರೇವಣ್ಣ ಇದ್ದರು

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-36-639322415

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.