ಹಾಸನ: ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಮೇಲಿನ ಕೆಲಸದ ಒತ್ತಡ, ಬಾಕಿ ವೇತನ ಬಿಡುಗಡೆ ವಿಳಂಬ ಸೇರಿದಂತೆ ಪಿಡಿಒಗಳ ಸೇವಾ ರಕ್ಷಣೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ವತಿಯಿಂದ ಹೆಚ್ಚುವರಿ ಜಿಲ್ಲಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮಾತನಾಡಿದ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಗಿರೀಶ್, ಇತ್ತೀಚೆಗೆ ಗದಗ ಜಿಲ್ಲೆಯ ರೋಣ ತಾಲ್ಲೂಕಿನಲ್ಲಿ ಪಿಡಿಒ ಮುಕ್ತಮಹುಸೇನ ಕರಡಿಗುಡ್ಡ ಎಂಬುವವರು ಅತಿಯಾದ ಕೆಲಸದ ಒತ್ತಡದ ಜೊತೆಗೆ ಲೋಕಾಯುಕ್ತ ತನಿಖೆ ಹಾಗೂ ವೇತನವಿಲ್ಲದೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದರು. ಧಾರವಾಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಅಮಾನತುಗೊಂಡು ಸುಮಾರು 8 ತಿಂಗಳು ವೇತನವಿಲ್ಲದೆ ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದರು. ಗದಗದ ಅಸೂಟಿ ಹಾಗೂ ಕೊತಬಾಲ ಎಂಬ ಎರಡು ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಯಾಗಿ ಕೆಲಸ ನಿರ್ವಹಿಸುವ ವೇಳೆ ಅತಿಯಾದ ಕೆಲಸದ ಒತ್ತಡದಿಂದ ಬೇಸತ್ತು ಆತ್ಮಹತ್ಯೆಗ ಶರಣಾದರು ಎಂದರು.

ಗ್ರಾಮೀಣಾಭಿವೃದ್ಧಿಯ ಆಧಾರ ಸ್ತಂಭವಾಗಿರುವ ಪಿಡಿಒಗಳು ತೀವ್ರವಾದ ಕೆಲಸದ ಒತ್ತಡದಿಂದ ನಲುಗುತ್ತಿದ್ದಾರೆ. ನಿರಂತರ ಒತ್ತಡ ಹಾಗೂ ಅಕಾಲಿಕ ಸಾವಿನ ಕುರಿತು ಅಧ್ಯಯನ ಮಾಡಲು ವರ್ಷದ ಹಿಂದೆಯೇ ಮೀನಾಕ್ಷಿ ಸುಂದರಂ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು. ಆದರೆ ಈವರೆಗೂ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಪಿಡಿಒ ಮುಕ್ತಮಹುಸೇನ ಕರಡಿಗುಡ್ಡ ಅವರ ಆತ್ಮಹತ್ಯೆಗೆ ಪ್ರಕರಣದ ಉನ್ನತ ಮಟ್ಟದ ತನಿಖೆ ನಡೆಸಿ ಅವರ ಕುಟುಂಬಕ್ಕೆ ಬಾಕಿ ವೇತನ, ಆರ್ಥಿಕ ಸೌಲಭ್ಯ ತಕ್ಷಣ ಒದಗಿಸಿ ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪದ ಆಧಾರದ ಸರ್ಕಾರಿ ಉದ್ಯೋಗ ನೀಡುವಂತೆ ಮನವಿ ಮಾಡಿದರು.

ಆಯುಕ್ತಾಲಯ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಕಚೇರಿಗಳಲ್ಲಿನ ಸಿಬ್ಬಂದಿಗೆ ಕಡ್ಡಾಯ ವರ್ಗಾವಣೆ ಜಾರಿಗೊಳಿಸಬೇಕು. ಹೆಚ್ಚುವರಿ ಹೊರೆ ತಪ್ಪಿಸಿ, ಒತ್ತಡ ರಹಿತ ಕೆಲಸ ಮಾಡುವ ವಾತಾವರಣ ಸೃಷ್ಟಿಸಬೇಕು. ಕ್ಷುಲ್ಲಕ ಕಾರಣಕ್ಕೆ ಅಮಾನತು ಮಾಡುವುದನ್ನು ತಪ್ಪಿಸುವುದರ ಜೊತೆಗೆ, ಯಾವುದೇ ವಿಚಾರಣೆಗೆ ಒಳಗಾದರೆ ನಿರ್ದಿಷ್ಟ ಕಾಲಮಿತಿಯೊಳಗೆ ತನಿಖೆ ನಡೆಸಿ ಅಮಾನತು ತೆರವು ಮಾಡಬೇಕು ಎಂದು ಆಗ್ರಹಿಸಿದರು.

ಸಂಘದ ಉಪಾಧ್ಯಕ್ಷ ಪ್ರಕಾಶ್, ಸಂಘಟನಾ ಕಾರ್ಯದರ್ಶಿ ಸುರೇಶ್, ಖಜಾಂಚಿ ಹರೀಶ್, ಸದಸ್ಯರು ಸೇರಿದಂತೆ ಜಿಲ್ಲೆಯ ಪಿಡಿಒಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-36-1174373799

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.