ಹಾಸನ: ಸಕಲೇಶಪುರ ತಾಲ್ಲೂಕಿನ ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರಿ-ವೆಡ್ಡಿಂಗ್ ಶೂಟ್ ನಡೆಸುವ ವೇಳೆ ವೃತ್ತಿಪರ ಛಾಯಾಗ್ರಾಹಕರ ಮೇಲೆ ಸ್ಥಳೀಯರಿಂದ ನಡೆದ ಹಲ್ಲೆ ಖಂಡಿಸಿ, ಛಾಯಾಗ್ರಾಹಕರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಸದಸ್ಯರು ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು. ಪ್ರಭಾರ ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣವರ್ ಅವರಿಗೆ ಮನವಿ ಸಲ್ಲಿಸಿದರು.

ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಸಭೆ ನಡೆಸಿದ ಸದಸ್ಯರು, ಬಳಿಕ ಮೌನ ಮೆರವಣಿಗೆ ನಡೆಸಿದರು. ಹೇಮಾವತಿ ಪ್ರತಿಮೆ, ಎನ್.ಆರ್. ವೃತ್ತ ಹಾಗೂ ಬಿ.ಎಂ. ರಸ್ತೆ ಮೂಲಕ ಸಾಗಿದ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿ ಎದುರು ಕೆಲಕಾಲ ಧರಣಿ ನಡೆಸಿದರು.

ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಚ್.ಎಸ್. ನಾಗೇಶ್ ಮಾತನಾಡಿ, ‘ಘಟನೆಯಲ್ಲಿ ಸುಮಾರು ₹5 ಲಕ್ಷಕ್ಕೂ ಹೆಚ್ಚು ಮೌಲ್ಯದ ಕ್ಯಾಮೆರಾ ಹಾಗೂ ಇತರೆ ಉಪಕರಣಗಳು ಹಾನಿಗೊಳಗಾಗಿದ್ದು, ಛಾಯಾಗ್ರಾಹಕರು ದೈಹಿಕ ಹಾಗೂ ಮಾನಸಿಕವಾಗಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಘಟನೆ ರಾಜ್ಯದಾದ್ಯಂತ ಛಾಯಾಗ್ರಾಹಕರಲ್ಲಿ ಭೀತಿ ಮೂಡಿಸಿದ್ದು, ವೃತ್ತಿಪರರಿಗೆ ಸುರಕ್ಷಿತ ವಾತಾವರಣದ ಅಗತ್ಯ ಎತ್ತಿ ಹಿಡಿದಿದೆ’ ಎಂದು ಹೇಳಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಸ್. ನಿಂಗರಾಜು ಮಾತನಾಡಿ, ಪ್ರಕರಣ ಸಂಬಂಧ ಅಧಿಕಾರಿಗಳು ತ್ವರಿತ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಸಂಘದ ರಾಜ್ಯ ಘಟಕದ ಕಾರ್ಯದರ್ಶಿ ಟಿ.ಸಿ. ನಾಗರಾಜು, ಪ್ರಧಾನ ಕಾರ್ಯದರ್ಶಿ ಬಿ.ಕೆ. ಧರ್ಮಶೆಟ್ಟಿ, ಎಸ್.ಜಿ. ನಾಗರಾಜು, ತುಮಕೂರು ಘಟಕದ ಅಧ್ಯಕ್ಷ ಕೆ.ಎಚ್. ಅನಿಲ್ ಕುಮಾರ್, ಸುನಿಲ್, ಶಿವಕುಮಾರ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-36-829881177

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.