ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನದಲ್ಲಿ ಸಸ್ಯಸಂತೆ ಇಂದಿನಿಂದ

Last Updated 15 ಮೇ 2019, 18:02 IST
ಅಕ್ಷರ ಗಾತ್ರ

ಹಾಸನ: ತೋಟಗಾರಿಕೆ ಇಲಾಖೆ ವತಿಯಿಂದ ಮೇ 16ರಿಂದ 20ವರೆಗೆ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಸಸ್ಯಸಂತೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ಹರ್ಷಿಯಾ ತಬಸುಮ್ ತಿಳಿಸಿದ್ದಾರೆ.

ಇಲಾಖೆಯ ವಿವಿಧ ತೋಟಗಾರಿಕೆ ಕ್ಷೇತ್ರಗಳಲ್ಲಿ ಬೇಡಿಕೆಗನುಸಾರವಾಗಿ ಉತ್ತಮ ಗುಣಮಟ್ಟದ ತರಕಾರಿ ಸಸಿಗಳನ್ನು ಮಾರಾಟ ಮಾಡಲಾಗುವುದು. ಆಸಕ್ತ ರೈತರು ತಮ್ಮಹೆಸರನ್ನು ನೋಂದಾಯಿಸಿಕೊಳ್ಳುವ ಮೂಲಕ ಅವಶ್ಯಕತೆ ಇರುವ ಸಸಿಗಳಿಗೆ ಬೇಡಿಕೆ ಸಲ್ಲಿಸಬಹುದು.

ಹೆಚ್ಚಿನ ವಿವರಗಳಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ. ರಾಜ್ಯವಲಯ ಹಾಸನದ ಕಚೇರಿ ಅಥವಾ ದೂ: 08172-269995 ಅನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT