ಹಾಸನ: ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ವಿರುದ್ಧ ಅವಹೇಳನಕಾರಿ, ಅಸಭ್ಯ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ಪ್ರಕಟಿಸಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನರೇಂದ್ರ ಮೋದಿ ಬ್ರಿಗೇಡ್ ಜಿಲ್ಲಾ ಘಟಕ ಸದಸ್ಯರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಸದಸ್ಯ ವೇಣುಗೋಪಾಲ್, ಕಾಂಗ್ರೆಸ್ ಪಕ್ಷದ ಕೆಲ ಪದಾಧಿಕಾರಿಗಳಾದ ನಂದೀಶ್ ಗೌಡ, ಡಾ. ಲಕ್ಷ್ಮೀಕಾಂತ ಸಿಂಗೆ ಹಾಗೂ ಬಿಂದುಗೌಡ ಅವರು ಫೇಸ್ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನ ಮಂತ್ರಿಗಳ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿ ಪೋಸ್ಟ್ಗಳನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿದರು.

ದೇಶದ ಸಂವಿಧಾನಾತ್ಮಕ ಹುದ್ದೆಯಲ್ಲಿರುವ ಪ್ರಧಾನಿ ಬಗ್ಗೆ ಈ ರೀತಿಯ ಹೇಳಿಕೆಗಳು ಸಾರ್ವಜನಿಕರ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇದೆ. ಅಲ್ಲದೆ, ರಾಜಕೀಯ ವೈಮನಸ್ಸು ಹಾಗೂ ಸಾಮಾಜಿಕ ಅಶಾಂತಿಗೆ ಕಾರಣವಾಗುವ ಅಪಾಯವೂ ಇದೆ ಎಂದರು.

ಸಾಮಾಜಿಕ ಜಾಲತಾಣಗಳ ಮೂಲಕ ಇಂತಹ ಹೇಳಿಕೆಗಳು ವ್ಯಾಪಕವಾಗಿ ಹರಡುವುದರಿಂದ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಆರೋಪಿತರ ವಿರುದ್ಧ ಸೂಕ್ತ ತನಿಖೆ ನಡೆಸಿ, ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅನ್ವಯ ಕಾನೂನು ಕ್ರಮ ಕೈಗೊಂಡು ಪ್ರಕರಣ ದಾಖಲಿಸಬೇಕು ಎಂದು ಮನವಿ ಮಾಡಿದರು. ಭವಿಷ್ಯದಲ್ಲಿ ಯಾರೂ ಸಮಾಜದ ಶಾಂತಿ ಕದಡುವ ಅಥವಾ ಪ್ರಚೋದನಕಾರಿ ಹೇಳಿಕೆಗಳನ್ನು ನೀಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಈ ವೇಳೆ ಜೇವನ್ರಾಜ್, ಪ್ರಸಾದ್, ನಗರಸಭೆ ಮಾಜಿ ಅಧ್ಯಕ್ಷ ಮೋಹನ್, ರಾಜ, ವೇಂಕಟೇಶ್ ರಾಜು,ಸ್ವಾಮಿ, ರಘು ,ಮುರುಳಿ, ಮದನ್ ಸತೀಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-36-1330735283

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.