ಹಾಸನ: ‘ಪೊಲೀಸ್ ಧ್ವಜ ಮಾರಾಟದಿಂದ ಸಂಗ್ರಹವಾಗುವ ನಿಧಿ, ನಿವೃತ್ತ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಆಧಾರವಾಗುತ್ತಿದ್ದು, ಪ್ರತಿ ಸಮಸ್ಯೆಯನ್ನು ಪೊಲೀಸ್ ಇಲಾಖೆಯ ಮೇಲೆ ಹಾಕುವುದು ಸರಿಯಲ್ಲ’ ಎಂದು ನಿವೃತ್ತ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೆ.ಎಸ್. ವೆಂಕಟೇಶ್ ನಾಯ್ಡು ಹೇಳಿದರು.

ನಗರದ ಡಿ.ಎ.ಆರ್. ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಗುರುವಾರ ನಡೆದ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

‘ಪೊಲೀಸ್ ಇಲಾಖೆ ಕೇವಲ ಕಾನೂನು, ಸುವ್ಯವಸ್ಥೆ ಕಾಯುವ ವ್ಯವಸ್ಥೆಯಷ್ಟೇ ಅಲ್ಲ. ಸಮಾಜದ ಭದ್ರತೆ ಮತ್ತು ನೆಮ್ಮದಿಗೆ ಬೆನ್ನೆಲುಬಾಗಿದೆ. ಆದರೆ ಸೇವೆಯಿಂದ ನಿವೃತ್ತಿಯಾದ ನಂತರ ಅನೇಕ ಪೊಲೀಸ್ ಸಿಬ್ಬಂದಿ ಆರ್ಥಿಕ ಹಾಗೂ ಆರೋಗ್ಯ ಸಮಸ್ಯೆ ಎದುರಿಸುತ್ತಿರುವುದು ವಾಸ್ತವ’ ಎಂದು ಹೇಳಿದರು.

‘ಧ್ವಜ ದಿನಾಚರಣೆ ಕೇವಲ ಆಚರಣೆಗಷ್ಟೇ ಸೀಮಿತವಾಗದೇ, ಮಾನವೀಯ ಮೌಲ್ಯಗಳನ್ನು ನೆನಪಿಸುವ ಕಾರ್ಯಕ್ರಮವಾಗಿದೆ. ಧ್ವಜ ಮಾರಾಟದಿಂದ ಸಂಗ್ರಹವಾಗುವ ನಿಧಿ ನಿವೃತ್ತ ಸಿಬ್ಬಂದಿ ಮತ್ತು ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೆರವಾಗುತ್ತದೆ’ ಎಂದು ತಿಳಿಸಿದರು.

‘ಸೇವೆಯಲ್ಲಿರುವಾಗ ಆರೋಗ್ಯದ ಕಡೆ ಗಮನ ಹರಿಸದ ಸಿಬ್ಬಂದಿ, ನಿವೃತ್ತಿಯ ನಂತರ ಸಂಕಷ್ಟಕ್ಕೆ ಸಿಲುಕುತ್ತಾರೆ. ಬಹುತೇಕರು ಆರೋಗ್ಯ ವಿಮೆ ಮಾಡಿಸಿಕೊಳ್ಳದಿರುವುದು ಸಮಸ್ಯೆಗೆ ಕಾರಣವಾಗುತ್ತಿದೆ. ಪ್ರತಿಯೊಬ್ಬರೂ ತಮ್ಮ ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡು ವೈಯಕ್ತಿಕ ಆರೋಗ್ಯ ವಿಮೆ ಮಾಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

‘ಆರೋಗ್ಯ ಭಾಗ್ಯ ಯೋಜನೆಯ ವ್ಯಾಪ್ತಿ ವಿಸ್ತರಿಸಿದರೂ, ಎಲ್ಲರಿಗೂ ಸಮರ್ಪಕವಾಗಿ ತಲುಪುತ್ತಿಲ್ಲ ಎಂದ ಅವರು, ಪೊಲೀಸ್ ಇಲಾಖೆಯ ಮೇಲೆ ಅನವಶ್ಯಕ ಆರೋಪಗಳು ಬರುವುದು ದುರದೃಷ್ಟಕರ. ಪ್ರತಿ ಸಮಸ್ಯೆಗೂ ಪೊಲೀಸ್ ಇಲಾಖೆಯನ್ನೇ ಹೊಣೆ ಮಾಡುವುದಕ್ಕಿಂತ, ಸಂಬಂಧಿತ ಇಲಾಖೆಗಳು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು’ ಎಂದು ಅಭಿಪ್ರಾಯಪಟ್ಟರು.

ಮುಖ್ಯ ಅತಿಥಿ ಕೆ.ಎಸ್. ವೆಂಕಟೇಶ್ ನಾಯ್ಡು ಅವರನ್ನು ಸನ್ಮಾನಿಸಲಾಯಿತು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎನ್. ಶ್ರೀನಿಧಿ, ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-36-578312528

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.