ಹಾಸನ: ಕಡಿಮೆ ರಕ್ತದೊತ್ತಡದಿಂದ ಬಳಲಿ ಅಸ್ವಸ್ಥರಾಗಿದ್ದ ತಾಲ್ಲೂಕಿನ ಶಾಂತಿಗ್ರಾಮ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ಶಂಕರ್ (54) ನಿಧನರಾದರು.

ಶಾಂತಿಗ್ರಾಮ ಸಿಪಿಐ ಕಚೇರಿಯಲ್ಲಿ ಬರಹಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಂಕರ್, 30 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಇತ್ತೀಚೆಗೆ ಕಡಿಮೆ ರಕ್ತದೊತ್ತಡದಿಂದ ಬಳಲುತ್ತಿದ್ದ ಶಂಕರ್, ದಿಢೀರ್ ಅಸ್ವಸ್ಥಗೊಂಡಿದ್ದರು. ತಕ್ಷಣ ಕುಟುಂಬಸ್ಥರು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಆದರೆ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಅವರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-36-1688945047

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.