ಹಾಸನ: ಜನಸ್ಪಂದನ ಕಾರ್ಯಕ್ರಮವನ್ನೇ ಕಾಯದೇ ಬಡವರ ಕೆಲಸವನ್ನು ಜವಾಬ್ದಾರಿಯುತವಾಗಿ ಮಾಡುವ ಮೂಲಕ ಜನರಿಗೆ ಸವಲತ್ತುಗಳನ್ನು ದೊರಕಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಶನಿವಾರ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಸ್ವೀಕೃತವಾಗಿರುವ ಅರ್ಜಿಗಳ ವಿಲೇವಾರಿ ಬಗ್ಗೆ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಿದ 4,538 ಅರ್ಜಿಗಳಲ್ಲಿ 4,444 ಅರ್ಜಿಗಳು ವಿಲೇವಾರಿಯಾಗಿದ್ದು, ಇದರಲ್ಲಿ ಕೆಲವು ಅರ್ಜಿ ಸಮರ್ಪಕವಾಗಿ ವಿಲೇವಾರಿಯಾಗಿಲ್ಲ. 94 ಸಿ ಮತ್ತು 94 ಸಿ.ಸಿ.ಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿಗೆ ಆದ್ಯತೆ ಮೇಲೆ ಜಂಟಿ ಸರ್ವೆ ಮಾಡಿ ಜನರಿಗೆ ಹಕ್ಕುಪತ್ರ ನೀಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜನಸ್ಪಂದನ ಕಾರ್ಯಕ್ರಮ ನಡೆಸುವುದರಿಂದ ಜನರ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲು ಸಹಕಾರಿ ಆಗಿದೆ. ಆರ್.ಆರ್.ಟಿ. ಪ್ರಕರಣಗಳಿಗೆ ಸಂಬಂಧಿಸಿದಂತೆ ಸ್ವೀಕಾರ ಆಗುತ್ತಿರುವ ಅರ್ಜಿಗಳನ್ನು ನೋಡಿದರೆ, ಇನ್ನೂ ಸಮಸ್ಯೆ ಬಗೆಹರಿಯುತ್ತಿಲ್ಲ. ಇದರ ಆಳ– ಅಗಲ ಎಷ್ಟಿದೆ ಎಂದು ತಿಳಿಯಬೇಕಿದೆ ಎಂದು ತಿಳಿಸಿದರು.

ಜನಸ್ಪಂದನ ಕಾರ್ಯಕ್ರಮದಲ್ಲಿ ಪದೆ ಪದೇ ಒಂದೇ ವಿಷಯಕ್ಕೆ ಸಂಬಂಧಿಸಿದ ಅರ್ಜಿಗಳು ಬರುತ್ತಿವೆ. ನೀವು ಸಮಸ್ಯೆಯನ್ನು ಅರ್ಥ ಮಾಡಿಕೊಂಡು ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು. ಕಾಟಾಚಾರಕ್ಕೆ ವಿಲೇವಾರಿ ಮಾಡಬಾರದು ಎಂದು ಸೂಚಿಸಿದರು.

ನಕಾಶೆಯಲ್ಲಿ ರಸ್ತೆ ಇರದ ಜಮೀನಿಗೆ ಬಿತ್ತನೆ ಬೀಜ, ರಸಗೊಬ್ಬರ ತೆಗೆದುಕೊಂಡು ಹೋಗಲು ಹಾಗೂ ಬೆಳೆ ಕಟಾವು ಮಾಡಿ ತೆಗೆದುಕೊಂಡು ಹೋಗಲು ಅವಕಾಶ ಕಲ್ಪಿಸಲು ತಹಶೀಲ್ದಾರ್ ಅವರಿಗೆ ಅಧಿಕಾರ ಇದೆ ಎಂದು ತಿಳಿಸಿದರು.

ಆರ್.ಆರ್.ಟಿ. ಸಂಬಂಧಿಸಿದ ಅರ್ಜಿಗಳನ್ನು ಜನರೆ ನೇರವಾಗಿ ಆನ್ಲೈನ್ ಮೂಲಕ ಸಲ್ಲಿಸಲು ಅವಕಾಶವಿದೆ. ಈ ನಿಟ್ಟಿನಲ್ಲಿ ಜನರಿಗೆ ಅರಿವು ಮೂಡಿಸಬೇಕು. ಸಾರ್ವಜನಿಕರ ಕೆಲಸ ತಂತಾನೇ ಆಗಬೇಕು. ಅವರು ಕಚೇರಿಗೆ ಅಲೆಯುವಂತೆ ಆಗಬಾರದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಅರ್ಥೈಸಿಕೊಂಡು ಜವಾಬ್ದಾರಿಯಿಂದ ನಿಮ್ಮ ಹಂತದಲ್ಲಿಯೇ ಪರಿಹಾರ ಮಾಡಬೇಕು ಎಂದು ಹೇಳಿದರು.

ಪುರಸಭೆಗಳ ವ್ಯಾಪ್ತಿಯಲ್ಲಿ ಯಾವುದೇ ಆಸ್ತಿಗೆ ಸಂಬಂಧಿಸಿದಂತೆ ಓಡಾಡಲು ಜಾಗವಿರಬೇಕು. ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ಕ್ರಮ ಕೈಗೊಳ್ಳಬೇಕು. ಗೋಮಾಳ, ಕೆರೆ, ಸ್ಮಶಾನ ಒತ್ತುವರಿಯನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಾಸನ- ಪಿರಿಯಾಪಟ್ಟಣ ರಸ್ತೆ 10 ರಿಂದ 15 ಕಡೆ ಎರಡು ಕಿ.ಮೀ. ಅಂತರದಲ್ಲಿ ಕಿತ್ತು ಹೋಗಿದೆ. ಗುಣಮಟ್ಟ ಸರಿಯಾಗಿದ್ದರೆ ಕಿತ್ತು ಹೋಗಲು ಹೇಗೆ ಸಾಧ್ಯ? ರಸ್ತೆ ಕಿತ್ತುಕೊಂಡು ಹೋಗುತ್ತಿದ್ದರೂ ಕೆಲಸ ಮುಂದುವರಿಯುತ್ತಿದೆ. ಹಾಗಾದರೆ ನಿಮ್ಮ ಜವಾಬ್ದಾರಿ ಏನು ಎಂದು ಎಂದು ಕೆ.ಆರ್.ಡಿ.ಸಿ.ಎಲ್. ಅಧಿಕಾರಿಯನ್ನು ಪ್ರಶ್ನಿಸಿದರು.

ಜನರು ಸ್ವಂತ ಜಮೀನಿನಲ್ಲಿ ಮನೆ ಕಟ್ಟಿಕೊಂಡಿದ್ದರೆ, ಖಾತೆ ನೀಡಬೇಕು. ಮನೆ ಕಟ್ಟಲು ಪರವಾನಗಿ ತೆಗೆದುಕೊಳ್ಳಲು ಜನರಿಗೆ ಮಾಹಿತಿ ತಲುಪಿಸಬೇಕು. ಮನೆ ಕಟ್ಟಲು ಪರವಾನಗಿ ನೀಡುವ ನಿಟ್ಟಿನಲ್ಲಿ ನರೇಗಾ ಎಂಜಿನಿಯರ್ಗಳ ಮೂಲಕ ಆನ್ಲೈನ್ನಲ್ಲಿ ಮನೆ ನಕ್ಷೆಯನ್ನು ಅಪ್ಲೋಡ್ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶುಭಂ ಶುಕ್ಲಾ ಹಾಗೂ ಅಧಿಕಾರಿಗಳಿಗೆ ಸೂಚಿಸಿದರು. ಇ-ಸ್ವತ್ತು ಮಾಡಲು ಕೂಡ ಒಂದು ಆಂದೋಲನ ಮಾಡುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಈಗಾಗಲೇ ಒಪ್ಪಿಗೆ ನೀಡಿರುವ 77 ಶಾಲೆಗಳನ್ನು ಸೇರಿಸಿ, ಕೆಪಿಎಸ್ ಶಾಲೆಗಳನ್ನು ತೆರೆಯಲು ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಬೇಕು. ಗ್ರಾಮಗಳಿಂದ ಮಕ್ಕಳನ್ನು ಕೆ.ಪಿ.ಎಸ್ ಶಾಲೆಗೆ ಕರೆತರಲು ಸ್ಥಳೀಯವಾಗಿ ಲಭ್ಯವಿರುವ ವಾಹನಗಳನ್ನು ಬಳಸಿಕೊಂಡು ಸಾರಿಗೆ ವ್ಯವಸ್ಥೆಗೆ ಕಲ್ಪಿಸಬೇಕು ಎಂದು ಸೂಚಿಸಿದರು.

ಸಂಸದ ಶ್ರೇಯಸ್ ಪಟೇಲ್, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಂ ಶುಕ್ಲಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-36-985598635

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.