ಹಾಸನ: ಪಿತ್ರಾರ್ಜಿತ ಆಸ್ತಿ ಹಂಚಿಕೆ ವಿಚಾರದಲ್ಲಿ ಅನ್ಯಾಯ ಎಸಗಿರುವ ಶಾಂತಿಗ್ರಾಮ ನಾಡಕಚೇರಿ ಅಧಿಕಾರಿಗಳು ಹಾಗೂ ಉಪನೋಂದಣಾಧಿಕಾರಿ ಕಚೇರಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ನಡೆಸುವಂತೆ ದಲಿತ ಸಂಘಟನಾ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಚೇತನ್ ಶಾಂತಿಗ್ರಾಮ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ಶಾಂತಿಗ್ರಾಮ ಹೋಬಳಿಯ ಕೊಂತಗೌಡನಹಳ್ಳಿ ಗ್ರಾಮದ ನಿವಾಸಿ ಸ್ವಾಮಿಗೌಡ ಕುಟುಂಬದ ಪಿತ್ರಾರ್ಜಿತ ಆಸ್ತಿ ಹಂಚಿಕೆ ಸಂದರ್ಭದಲ್ಲಿ ಮೋಸ ನಡೆದಿದೆ ಎಂದರು.

ಈ ಕುರಿತು ಹಲವು ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಮೇಲ್ನೋಟಕ್ಕೆ ಲಂಚ ಪಡೆದು ಖಾತೆ ಬದಲಾವಣೆ ಮಾಡಿರುವ ಅನುಮಾನ ಕುಟುಂಬದವರಿಗೆ ಇದೆ ಎಂದು ಹೇಳಿದರು.

ಹಾಸನ ಉಪನೊಂದಣಾಧಿಕಾರಿ ಕಚೇರಿಗೆ ಭೂಮಿಯ ನೋಂದಣಿ ಮಾಡದಂತೆ ಮನವಿ ಸಲ್ಲಿಸಿದ್ದರೂ, ಸಂಬಂಧಪಟ್ಟ ಭೂಮಿಯನ್ನು ಬೇರೆ ವ್ಯಕ್ತಿಗೆ ನೋಂದಣಿ ಮಾಡಿಕೊಟ್ಟು ವಾಣಿಜ್ಯ ಅಭಿವೃದ್ಧಿಗೆ ಒಪ್ಪಂದ ಮಾಡಿಕೊಡಲಾಗಿದೆ ಎಂದರು.

ಸರ್ಕಾರಕ್ಕೆ ಹಣ ಪಾವತಿಯಾದರೆ ನೋಂದಣಿ ಮಾಡಿಕೊಡುವುದು ನಮ್ಮ ಕೆಲಸ. ಉಳಿದ ವಿಚಾರ ನ್ಯಾಯಾಲಯದಲ್ಲಿ ಬಗೆಹರಿಸಿಕೊಳ್ಳಿ ಎಂದು ಉಪನೋಂದಣಾಧಿಕಾರಿ ಹನುಮಂತಗೌಡ ಉಡಾಫೆಯ ಉತ್ತರ ನೀಡಿದ್ದಾರೆ ಎಂದು ಆರೋಪಿಸಿದರು.

ಭೂ ಮಾಲೀಕರಿಗೆ ಅನ್ಯಾಯವಾಗುವ ರೀತಿಯಲ್ಲಿ ನಾಡಕಚೇರಿ ಹಾಗೂ ನೋಂದಣಿ ಕಚೇರಿಯಲ್ಲಿ ನಡೆಯುತ್ತಿರುವ ಅಕ್ರಮಗಳ ಕುರಿತು ಲೋಕಾಯುಕ್ತ ತನಿಖೆ ನಡೆಸಬೇಕು. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಎಚ್.ಸಿ ಸಂತೋಷ್, ಪೂರ್ಣಿಮಾ, ಸ್ವಾಮೀಗೌಡ, ದಿನೇಶ್, ಚಿಕ್ಕಯ್ಯ, ಕೆ.ಆರ್. ಮಂಜುನಾಥ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-36-2028263958

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.