ಸೋಮವಾರ, ಜನವರಿ 25, 2021
27 °C

ಭತ್ತ, ರಾಗಿ ಜಲಾವೃತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಜಿಲ್ಲೆಯ ಅರಕಲಗೂಡು, ಸಕಲೇಶಪುರ, ಬೇಲೂರು ತಾಲ್ಲೂಕಿನಲ್ಲಿ ಬುಧವಾರ ತಡರಾತ್ರಿ ಹಾಗೂ
ಗುರುವಾರ ಬೆಳಗಿನ ಜಾವ ಸುರಿದ ಅಕಾಲಿಕ ಮಳೆಯಿಂದ ಕಾಫಿ, ಭತ್ತ, ರಾಗಿ ನೀರಿನಲ್ಲಿ ಮುಳಗಿದ್ದು,
ಬದುಕು ಮೂರಾಬಟ್ಟೆಯಾಗಿದೆ. ರಾತ್ರಿಯಿಡಿ ಸುರಿದ ಧಾರಾಕಾರ ಮಳೆಯಿಂದ ಕಟಾವು ನಡೆಸಿದ ಭತ್ತ
ಹುಲ್ಲು ನೀರಿನಲ್ಲಿ ಮುಳುಗಿ ಕರಗುತ್ತಿದೆ.
ಹೇಮಾವತಿ, ಕಾವೇರಿ ನದಿ ನಾಲಾ ವ್ಯಾಪ್ತಿಯ ಸಾವಿರಾರು ಎಕರೆ ಪ್ರದೇಶದಲ್ಲಿ ರೈತರು ಭತ್ತದ ಬೆಳೆ
ಬೆಳೆದಿದ್ದು, ಕೆಲವೆಡೆ ಕಟಾವು ಮುಗಿಸಿ ಬಣವೆ ಹಾಕಿದ್ದಾರೆ. ಇನ್ನು ಕೆಲವು ಕಡೆ ಬೆಳೆದು ನಿಂತಿದ್ದ ರಾಜಮುಡಿ
ಭತ್ತ ಮಳೆಗೆ ಹಾನಿಯಾಗಿದೆ. ಕಟಾವು ಮಾಡಿ ಗದ್ದೆಗಳಲ್ಲಿ ಅರಿ ಹಾಕಿದ್ದ ಭತ್ತದ ಹುಲ್ಲು ಜಲಾವೃತವಾಗಿದೆ. ಆಲೂರು ತಾಲ್ಲೂಕಿನ ಕಣತೂರು, ಮುರುಡೂರು, ಬಾವಸವಳ್ಳಿ, ಕಲ್ಲಹಳ್ಳಿ ಸೇರಿ ಹಲವು ಗ್ರಾಮಗಳಲ್ಲಿ ಭತ್ತದ ಬೆಳೆ ನಾಶವಾಗಿದೆ.

ಬೇಲೂರು ತಾಲ್ಲೂಕಿನಲ್ಲಿ ಗಿಡದಲ್ಲಿದ್ದ ಹಾಗೂ ಕಣದಲ್ಲಿ ಒಣಗಲು ಹಾಕಿದ್ದ ಕಾಫಿ ಕೊಚ್ಚಿ ಹೋಗಿದೆ. ಸಕಲೇಶಪುರ ಭಾಗದಲ್ಲಿ ಕಣದಲ್ಲಿ ಒಣಗಲು ಹಾಕಿದ್ದ ಕಾಫಿ ಮಳೆ ನೀರಿನಲ್ಲಿ ನೆನೆದ ಪರಿಣಾಮ ಕಾಫಿ ಬೀಜಗಳ ಗುಣಮಟ್ಟ ಹಾಳಾಗಿದೆ.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು