ಹಾಸನ: ರೆಡ್ಕ್ರಾಸ್ ಸಂಸ್ಥೆಯಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ರಕ್ತದಾನ ಶಿಬಿರಗಳು, ಉಚಿತ ಆರೋಗ್ಯ ತಪಾಸಣೆ ಶಿಬಿರಗಳು ಹಾಗೂ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮಗಳನ್ನು ನಿಸ್ವಾರ್ಥ ಭಾವದಿಂದ ನಡೆಸುತ್ತಿರುವುದು ಯುವಜನತೆಗೆ ಪ್ರೇರಣಾದಾಯಕ ಎಂದು ಹಾಸನ ವಿಶ್ವವಿದ್ಯಾಲಯದ ಕುಲಸಚಿವ ಬಿ.ಎ. ಜಗದೀಶ್ ಹೇಳಿದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಹಾಸನ ಹಾಗೂ ಹಾಸನ ವಿಶ್ವವಿದ್ಯಾಲಯಗಳ ಆಶ್ರಯದಲ್ಲಿ ಜಿಲ್ಲೆಯ ಪದವಿ ಕಾಲೇಜುಗಳ ಯುವ ರೆಡ್ ಕ್ರಾಸ್ ಘಟಕದ ಸಂಯೋಜಕರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರೆಡ್ ಕ್ರಾಸ್ ಸಂಸ್ಥೆ ಹಾಸನ ಜಿಲ್ಲೆಯಲ್ಲಿ ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮ ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು.

ರೆಡ್ ಕ್ರಾಸ್ ಸಂಸ್ಥೆ ರಾಜ್ಯ ಶಾಖೆಯ ಪ್ರಧಾನ ಕಾರ್ಯದರ್ಶಿ ಉಮಾಕಾಂತ್ ಹಾಗೂ ರಾಜ್ಯ ಯುವ ರೆಡ್ ಕ್ರಾಸ್ ಘಟಕದ ಸಂಯೋಜಕ ಆನಂದ್ ಡಿ.ಜಿ. ಮಾತನಾಡಿ, ಶಿಕ್ಷಣ ಇಲಾಖೆಯ ನಿರ್ದೇಶನಾಲಯದ ಸೂಚನೆಯಂತೆ ಕರ್ನಾಟಕದ ಎಲ್ಲ ಕಾಲೇಜುಗಳ ಯುವ ರೆಡ್ ಕ್ರಾಸ್ ಘಟಕದ ಸಂಯೋಜಕರ ಸಭೆಯನ್ನು ಆನ್ಲೈನ್ ಮೂಲಕ ನಡೆಸಿ, ಯುವ ರೆಡ್ ಕ್ರಾಸ್ ಘಟಕ ನೋಂದಣಿ, ಕಾರ್ಯಕ್ರಮ ವಿವರಗಳು, ಹಣಕಾಸು ನಿರ್ವಹಣೆ ಸೇರಿದಂತೆ ಅಗತ್ಯ ಮಾಹಿತಿಗಳನ್ನು ಹಂಚಿಕೊಂಡರು.

ಅಧ್ಯಕ್ಷತೆ ವಹಿಸಿದ್ದ ರೆಡ್ ಕ್ರಾಸ್ ಜಿಲ್ಲಾ ಶಾಖೆಯ ಸಭಾಪತಿ ಹೆಮ್ಮಿಗೆ ಮೋಹನ್ ಮಾತನಾಡಿ, ಹಾಸನ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಜಿಲ್ಲೆಯಾದ್ಯಂತ ಮಾನವೀಯ ಮೌಲ್ಯಗಳನ್ನು ಬೆಳೆಸುವ ಅನೇಕ ಕಾರ್ಯಕ್ರಮಗಳನ್ನು ಸಂಸ್ಥೆ ನಡೆಸುತ್ತಿದೆ ಎಂದು ತಿಳಿಸಿದರು.

ಕಾಲೇಜು ಸಂಯೋಜಕರ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿ, ದುಶ್ಚಟಗಳಿಗೆ ಬಲಿಯಾಗದಂತೆ ತಡೆಯುವುದು ಕಾರ್ಯಕ್ರಮದ ಉದ್ದೇಶ. ಯುವ ರೆಡ್ ಕ್ರಾಸ್ ಘಟಕದ ಅಡಿಯಲ್ಲಿ ಪ್ರತಿ ಕಾಲೇಜಿನಲ್ಲಿ ಸಮಿತಿಗಳನ್ನು ರಚಿಸಿ, ವಿದ್ಯಾರ್ಥಿಗಳಲ್ಲಿ ಶಿಸ್ತು, ನಾಯಕತ್ವ, ಸೇವಾ ಮನೋಭಾವ ಮತ್ತು ಸಾಮಾಜಿಕ ಜವಾಬ್ದಾರಿ ಬೆಳೆಸಲು ಮುಂದಾಗಬೇಕು ಎಂದು ಹೇಳಿದರು.

ನಿರ್ದೇಶಕರಾದ ಶಬ್ಬೀರ್ ಅಹ್ಮದ್, ಉದಯ್ಕುಮಾರ್ ಮತ್ತು ಕೆ.ಟಿ. ಜಯಶ್ರೀ ಮಾತನಾಡಿ, ರೆಡ್ ಕ್ರಾಸ್ ಸಂಸ್ಥೆಯ ಇತಿಹಾಸ, ಸ್ಥಾಪನೆಯ ಹಿನ್ನೆಲೆ ಹಾಗೂ ಮಾನವೀಯ ಉದ್ದೇಶಗಳನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜಿಲ್ಲೆಯ ಪದವಿ ಕಾಲೇಜುಗಳ ಸಂಯೋಜಕರು, ಯುವ ರೆಡ್ ಕ್ರಾಸ್ ಘಟಕದ ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮತ್ತು ವ್ಯವಸ್ಥಿತವಾಗಿ ಆಯೋಜಿಸುವ ಕುರಿತು ಮಹತ್ವದ ಸಲಹೆಗಳು ಹಾಗೂ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.

ರೆಡ್ ಕ್ರಾಸ್ ಸಂಸ್ಥೆಯ ಜಯೇಂದ್ರ ಕುಮಾರ್, ಸುಬ್ಬಸ್ವಾಮಿ, ಗಿರೀಶ್, ಗಿರಿಗೌಡ, ಭೀಮ್ ರಾಜ್, ಮಧು ಕೆ.ಆರ್. ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260305-36-1478047549

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.