ಹಾಸನ: ‘ಹಕ್ಕುಚ್ಯುತಿ ಅಧಿಕಾರ ದುರುಪಯೋಗ ಪಡಿಸಿಕೊಂಡ ಶಾಸಕ ಎಚ್.ಡಿ. ರೇವಣ್ಣ ಅವರು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿದ್ದಾರೆ’ ಎಂದು ಸಂಸದ ಶ್ರೇಯಸ್ ಪಟೇಲ್ ಆರೋಪಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರೇವಣ್ಣ ಅವರು ಹಿರಿಯ ಜನಪ್ರತಿನಿಧಿಯಾಗಿ ಜಿಲ್ಲೆಯ ಆಡಳಿತ ವ್ಯವಸ್ಥೆಯಲ್ಲಿ ಅನಾವಶ್ಯಕ ಹಸ್ತಕ್ಷೇಪ ಮಾಡುತ್ತಿದ್ದಾರೆ. ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಮೇಲೂ ಒತ್ತಡ ಹೇರುವ ಮೂಲಕ ಕ್ಷುಲ್ಲಕ ರಾಜಕೀಯ ಮಾಡುತ್ತಿದ್ದಾರೆ’ ಎಂದು ದೂರಿದರು.

‘ಹಿರಿಯರಾದ ರೇವಣ್ಣ ಅವರು, ತಮ್ಮ ರಾಜಕೀಯ ಅನುಭವದ ಮೂಲಕ ಕಿರಿಯರಿಗೆ ಮಾರ್ಗದರ್ಶನ ನೀಡಬೇಕು. ಆದರೆ ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಎಷ್ಟು ಸರಿ’ ಎಂದರು.

‘ಸದನದಲ್ಲಿ ಕ್ಷೇತ್ರದ ಹಾಗೂ ಜಿಲ್ಲೆಯ ಅಭಿವೃದ್ಧಿ ವಿಚಾರಗಳನ್ನು ಪ್ರಸ್ತಾಪಿಸುವ ಬದಲು ಅಧಿಕಾರಿಗಳ ವಿರುದ್ಧವೇ ಟೀಕೆ ಮಾಡುತ್ತಿರುವುದು ಸರಿಯಲ್ಲ’ ಎಂದರು.

ಹೊಳೆನರಸೀಪುರ ಜಾತ್ರೆಯಲ್ಲಿ ನಡೆದ ಗಲಾಟೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಈ ಘಟನೆಗೆ ಸಂಬಂಧಿಸಿದ ಸತ್ಯಾಸತ್ಯತೆ ಜಿಲ್ಲೆಯ ಜನರಿಗೆ ತಿಳಿದಿದೆ. ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತಾರೆ’ ಎಂದು ಹೇಳಿದರು.

‘ಜಿಲ್ಲಾಧಿಕಾರಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿದ್ದರೂ ಅವರ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡಿರುವುದು ಖಂಡನೀಯ’ ಎಂದರು.

ಪ್ರಜ್ವಲ್ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಅವರು, ‘ಈ ಪ್ರಕರಣ ಕುರಿತು ಎಸ್ಐಟಿ ತನಿಖೆ ನಡೆಸುತ್ತಿದ್ದು, ತನಿಖೆಯಲ್ಲಿ ಯಾರೂ ಮೂಗು ತೂರಿಸಲು ಸಾಧ್ಯವಿಲ್ಲ. ಯಾರಿಗಾದರೂ ಅನ್ಯಾಯವಾಗಿದೆ ಎನ್ನುವ ಅನುಮಾನ ಇದ್ದರೆ ನ್ಯಾಯಾಲಯದ ಮೊರೆ ಹೋಗಬಹುದು’ ಎಂದು ಹೇಳಿದರು.

‘ಜಿಲ್ಲೆಯಲ್ಲಿ 7,731 ಗೃಹಬಳಕೆ ಸಿಲಿಂಡರ್ಗಳು ದಾಸ್ತಾನು ಲಭ್ಯವಿರುವುದರಿಂದ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಎರಡು ದಿನ ತಡವಾಗಿಯಾದರೂ ಸಿಲಿಂಡರ್ ಸಿಗಲಿದ್ದು, ಯಾರೂ ಆತಂಕಕ್ಕೆ ಒಳಗಾಗಬಾರದು. ಯುದ್ಧದ ಹಿನ್ನೆಲೆಯಲ್ಲಿ ತೊಂದರೆಯಾಗಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು’ ಎಂದು ಮನವಿ ಮಾಡಿದರು.

‘ಹೊಳೆನರಸೀಪುರ ಲಕ್ಷ್ಮಿನರಸಿಂಹಸ್ವಾಮಿ ಒಂದು ಕುಟುಂಬದ ಆಸ್ತಿಯಲ್ಲ, ಜಾತ್ರೆಯ ತೆರಿಗೆ, ದೇವರಿಗೆ ಹೊಸ ಬಟ್ಟೆ ತೊಡಿಸುವ ವಿಚಾರದಲ್ಲಿ ರಾಜಕೀಯ ಮಾಡಲಾಗಿದೆ. ತಾಲ್ಲೂಕು ಆಡಳಿತದ ತೀರ್ಮಾನದಂತೆ ನಾನು ರಥಕ್ಕೆ ಹೊಸ ಬಟ್ಟೆ ಖರೀದಿಗೆ ₹ 2 ಲಕ್ಷ ನೀಡಿದ್ದು, ಇದನ್ನು ಸಹಿಸದೇ ಆರೋಪ ಮಾಡುತ್ತಿದ್ದಾರೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-36-898852274

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.