ಹಾಸನ: ಚಾಲಕನ ನಿಯಂತ್ರಣ ತಪ್ಪಿದ ಪೊಲೀಸ್ ಜೀಪ್ ಪಕ್ಕದ ಮನೆಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಮೃತಪಟ್ಟಿರುವ ಘಟನೆ ಭಾನುವಾರ ತಾಲ್ಲೂಕಿನ ಕಿತ್ತಾನೆ ಬಳಿ ನಡೆದಿದೆ.

ಮಧ್ಯಪ್ರದೇಶದ ಸಿಂಗ್ರುಲಿ ಜಿಲ್ಲೆಯ ದೋಸಾರ್ ಗ್ರಾಮದ ಹರ್ಷಬರ್ಧನ್ (26) ಮೃತಪಟ್ಟಿರುವ ಐಪಿಎಸ್ ಅಧಿಕಾರಿ. ಜೀಪ್ ಚಾಲಕ, ಹಾಸನದ ಡಿಎಆರ್ ಕಾನ್ಸ್ಟೆಬಲ್ ಮಂಜೇಗೌಡ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೈಸೂರಿನಿಂದ ಹಾಸನಕ್ಕೆ ಬರುತ್ತಿದ್ದ ಮಹೇಂದ್ರ ಬುಲೆರೋ ಜೀಪ್ ಟೈಯರ್ ಸ್ಫೋಟದಿಂದ ನಿಯಂತ್ರಣ ತಪ್ಪಿ ರಸ್ತೆಯ ಎಡಭಾಗದ ತಡೆಕಂಬಗಳಿಗೆ ಡಿಕ್ಕಿ ಹೊಡೆದು ನಂತರ ತೆಂಗಿನ ಮರಕ್ಕೆ ಡಿಕ್ಕಿಯಾಗಿದ್ದು, ಪಕ್ಕದ ಮನೆಗೆ ತಾಗಿ ನಿಂತಿದೆ. ಅಪಘಾತ ಸಂಭವಿಸುತ್ತಿದ್ದಂತೆ ಆಂಬುಲೆನ್ಸ್ ಮೂಲಕ ಹರ್ಷಬರ್ಧನ್ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ಕರೆತಂದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಯಿತು. ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಅವರನ್ನು ಝೀರೋ ಟ್ರಾಫಿಕ್ನಲ್ಲಿ ಬೆಂಗಳೂರಿಗೆ ಕರೆದೊಯ್ಯುವ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಅಷ್ಟರಲ್ಲಿಯೇ ಹರ್ಷಬರ್ಧನ್ ಮೃತಪಟ್ಟಿರುವುದಾಗಿ ವೈದ್ಯರು ಪ್ರಕಟಿಸಿದರು.

ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮೊಹಮದ್ ಸುಜೀತಾ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆಗೆ ವ್ಯವಸ್ಥೆ ಮಾಡಿದರು.

ಹರ್ಷಬರ್ಧನ್ ಅವರು ಪ್ರೊಬೇಷನರಿ ಎಎಸ್ಪಿಯಾಗಿ ಹಾಸನಕ್ಕೆ ನಿಯೋಜನೆಗೊಂಡಿದ್ದರು. ಕರ್ತವ್ಯಕ್ಕೆ ಹಾಜರಾಗಲು ಬರುವ ವೇಳೆ ಈ ಘಟನೆ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.