ಹಾಸನ: ಸಕಲೇಶಪುರ ತಾಲ್ಲೂಕಿನ ಎಡಕುಮೇರಿ-ಶಿರಬಾಗಿಲು ರೈಲು ಮಾರ್ಗದಲ್ಲಿ ಹಳಿ ಕಾಮಗಾರಿಯಲ್ಲಿ ತೊಡಗಿದ್ದ ಸಚಿನ್ (34) ರೈಲು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದಾರೆ.

ಶುಕ್ರವಾರ ಕೆಲಸ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ರೈಲು ಡಿಕ್ಕಿ ಹೊಡೆಯುತ್ತಿದ್ದಂತೆ ಸ್ಥಳದಲ್ಲಿದ್ದ ಇತರೆ ಕಾರ್ಮಿಕರು ತಕ್ಷಣ ಸಚಿನ್ ಅವರನ್ನು ರಕ್ಷಿಸಿದ್ದಾರೆ. ಡಿಕ್ಕಿಯ ರಭಸಕ್ಕೆ ಸಚಿನ್ ಅವರ ಎದೆ, ತಲೆ ಹಾಗೂ ಮುಖಕ್ಕೆ ತೀವ್ರ ಪೆಟ್ಟಾಗಿದೆ. ತಕ್ಷಣ ಅವರನ್ನು ಸಕಲೇಶಪುರ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-36-2137834446

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.