ಹಾಸನ: ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿಯಲ್ಲಿ ಮಂಗಳವಾರ ಕಾಡಾನೆ ದಾಳಿಯಿಂದ ತೋಟಕ್ಕೆ ಹೊರಟಿದ್ದ ಕಾರ್ಮಿಕ ಮಹಿಳೆ ಶೋಭಾ (40) ಮೃತಪಟ್ಟರು. ಅವರ ತಾಯಿ ರಾಜಮ್ಮ ಪಾರಾಗಿದ್ದಾರೆ.

ಮೃತದೇಹವಿಟ್ಟು ಪ್ರತಿಭಟಿಸಿದ ಗ್ರಾಮಸ್ಥರು, ‘ಪ್ರತಿ ಬಾರಿ ಸಾವು ಸಂಭವಿಸಿದಾಗ ಸರ್ಕಾರವು ಪರಿಹಾರದ ಭರವಸೆ ನೀಡುವುದು ಬಿಟ್ಟರೆ ಶಾಶ್ವತ ಪರಿಹಾರವನ್ನು ಕಲ್ಪಿಸಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಸ್ಥಳಕ್ಕೆ ಧಾವಿಸಿ ಆನೆಯನ್ನು ಕಾಡಿಗೆ ಮರಳಿಸಲು ಅಥವಾ ಸೆರೆ ಹಿಡಿಯಲು ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ’ ಎಂದು ಅರಣ್ಯಾಧಿಕಾರಿಯೊಬ್ಬರು ತಿಳಿಸಿದರು.

ಆನೆ ಸೆರೆ –ಸಚಿವರ ಸೂಚನೆ

ಬೀದರ್ ವರದಿ: ‘ಮೂಗಲಿ ಗ್ರಾಮದಲ್ಲಿ ಮಂಗಳವಾರ ಕಾಡಾನೆ ದಾಳಿಗೆ ಮಹಿಳೆ ಸತ್ತಿರುವ ಪ್ರಕರಣದಲ್ಲಿ ಕುಟುಂಬಕ್ಕೆ ಪರಿಹಾರ ನೀಡಬೇಕು. ದಾಳಿ ನಡೆಸಿದ ಆನೆ ಸೆರೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕೂಡಲೇ ಸ್ಥಳಕ್ಕೆ ಧಾವಿಸಿ ಆನೆಯನ್ನು ಕಾಡಿಗೆ ಮರಳಿಸಲು ಅಥವಾ ಆನೆ ಸೆರೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ವನ್ಯಜೀವಿ ವಿಭಾಗದ ಹಿರಿಯ ಅಧಿಕಾರಿಗಳಿಗೆ ಸೂಚಿಸಿರುವ ಅವರು, ಕೂಡಲೇ ಸ್ಥಳಕ್ಕೆ ತೆರಳಿ ಪರಿಸ್ಥಿತಿ ನಿಭಾಯಿಸುವಂತೆ ಹಾಸನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ನಿರ್ದೇಶನ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.