ಹಾಸನ: ಕಟ್ಟಡ ನಿರ್ಮಾಣದಲ್ಲಿ ಸೆಟ್ಬ್ಯಾಕ್ ನಿಯಮಗಳಿಂದ ಸಾರ್ವಜನಿಕರು ಎದುರಿಸುತ್ತಿರುವ ತೊಂದರೆ ಬಗ್ಗೆ ಗಮನ ಹರಿಸಿರುವ ಸರ್ಕಾರ ಸಡಿಲಿಕೆ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸುತ್ತಿದೆ ಎಂದು ಶಾಸಕ ಎಚ್.ಪಿ. ಸ್ವರೂಪ್ ತಿಳಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯವನ್ನು ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರದ ಗಮನಕ್ಕೆ ತಂದಿರುವುದಾಗಿ ಹೇಳಿದರು.

ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಮನೆ ನಿರ್ಮಾಣಕ್ಕೆ ಅನುಮತಿ ಇದ್ದರೂ, ಕಠಿಣ ಸೆಟ್ಬ್ಯಾಕ್ ನಿಯಮಗಳಿಂದ ಸಾಮಾನ್ಯ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ವಿಶೇಷವಾಗಿ 30X40 ಮತ್ತು 20X30 ಅಳತೆಯ ಸಣ್ಣ ನಿವೇಶನಗಳಲ್ಲಿ ಮನೆ ಕಟ್ಟಲು ಮುಂದಾಗುವವರಿಗೆ ಈ ನಿಯಮಗಳು ದೊಡ್ಡ ತೊಂದರೆಯಾಗಿದ್ದು, ಅನೇಕರು ತಮ್ಮ ಯೋಜನೆ ಮುಂದೂಡಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ ಎಂದರು.

ಸರ್ಕಾರ ಸಂಬಂಧಿತ ಅಧಿಕಾರಿಗಳು ಹಾಗೂ ಸಚಿವರೊಂದಿಗೆ ಚರ್ಚೆ ನಡೆಸಿದ್ದು, ಬೆಂಗಳೂರು ಮಾದರಿಯಲ್ಲಿ ಇತರ ನಗರಗಳಲ್ಲೂ ನಿಯಮಗಳನ್ನು ಸರಳೀಕರಿಸುವ ಕುರಿತು ಅಂತಿಮ ಹಂತದ ಚರ್ಚೆಗಳು ನಡೆಯುತ್ತಿವೆ ಎಂದು ಹೇಳಿದರು.

ಕಾನೂನು ಚೌಕಟ್ಟಿನೊಳಗೆ ಸಾರ್ವಜನಿಕರಿಗೆ ಅನುಕೂಲಆಗುವಂತೆ ತಿದ್ದುಪಡಿ ತರಲು ಕ್ರಮ ಕೈಗೊಳ್ಳಲಾಗುತ್ತಿದೆ. ಸೆಟ್ಬ್ಯಾಕ್ ನಿಯಮ ಸಡಿಲಿಕೆಯಿಂದ ಸಣ್ಣ ಹಾಗೂ ಮಧ್ಯಮ ವರ್ಗದ ಜನರಿಗೆ ಪ್ರಯೋಜನವಾಗಲಿದೆ. ಮನೆ ನಿರ್ಮಾಣ ಪ್ರಕ್ರಿಯೆ ಸುಗಮವಾಗುವುದರ ಜೊತೆಗೆ ಗುತ್ತಿಗೆದಾರರಿಗೂ ಉದ್ಯೋಗಾವಕಾಶಗಳು ಹೆಚ್ಚುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟರು.

ಈ ಕುರಿತು ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಬರುವ ನಿರೀಕ್ಷೆಯಿದ್ದು, ಸಾರ್ವಜನಿಕರು ಆತಂಕ ಪಡಬೇಕಿಲ್ಲ. ಜನಪರ ನಿರ್ಧಾರ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಸ್ವರೂಪ್ ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-36-1856301607

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.