ಹಾಸನ: ಜಿಲ್ಲೆಯ ಆಲೂರು ತಾಲ್ಲೂಕಿನ ಹೊಸಮಠ ಗ್ರಾಮದಲ್ಲಿರುವ ಪವಿತ್ರ ಶಿಲುಬೆ ಬೆಟ್ಟದಲ್ಲಿ ನಡೆಯುತ್ತಿರುವ ಗಣಿಗಾರಿಕೆಯನ್ನು ತಕ್ಷಣವೇ ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಹಾಗೂ ಗ್ರಾಮಸ್ಥರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ಬಂದ ಪ್ರತಿಭಟನಕಾರರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೆಲಕಾಲ ಧರಣಿ ನಡೆಸಿದರು.

ಈ ವೇಳೆ ಮಾತನಾಡಿದ ರೈತ ಮುಖಂಡ ಬಾಬು, ಹೊಸಮಠ ಗ್ರಾಮದ ಶಿಲುಬೆ ಬೆಟ್ಟವು ಕ್ರೈಸ್ತ ಧರ್ಮದ ಪವಿತ್ರ ಸ್ಥಳವಾಗಿದ್ದು, ಇಲ್ಲಿ ನಡೆಯುತ್ತಿರುವ ಗಣಿಗಾರಿಕೆಯ ಸ್ಫೋಟದಿಂದ ಸುತ್ತಲಿನ ಹಳ್ಳಿಗಳ ಮನೆಗಳಿಗೆ ಬಿರುಕು ಉಂಟಾಗುತ್ತಿದೆ. ಭಾರಿ ವಾಹನ ಸಂಚಾರದಿಂದ ರಸ್ತೆಗಳು ಹಾಳಾಗಿದ್ದು, ಕಾಡು ಪ್ರಾಣಿಗಳು ಹಾಗೂ ಆನೆಗಳು ವಾಸಸ್ಥಳಗಳಿಗೆ ನುಗ್ಗಿ ಬೆಳೆ ಹಾನಿ ಆಗುತ್ತಿದೆ ಎಂದು ಆರೋಪಿಸಿದರು.

ಗಣಿಗಾರಿಕೆಯಿಂದ ಕೃಷಿಗೆ ತೊಂದರೆ ಉಂಟಾಗುತ್ತಿದ್ದು, ಮಳೆಗಾಲದಲ್ಲಿ ಕಲುಷಿತ ನೀರು ಹಾಗೂ ದೂಳು ಕೃಷಿಭೂಮಿಗೆ ಸೇರಿ ಕಾಫಿ, ಮೆಣಸು, ಭತ್ತ ಸೇರಿದಂತೆ ವಿವಿಧ ಬೆಳೆಗಳು ಹಾನಿಗೆ ಒಳಗಾಗುತ್ತಿವೆ. ರಸ್ತೆಗಳ ದುಸ್ಥಿತಿಯಿಂದ ಶಾಲಾ ವಾಹನಗಳು ಸಂಚಾರಕ್ಕೆ ನಿರಾಕರಿಸುತ್ತಿದ್ದು, ಮಕ್ಕಳ ವಿದ್ಯಾಭ್ಯಾಸಕ್ಕೂ ಅಡಚಣೆ ಉಂಟಾಗಿದೆ ಎಂದು ಹೇಳಿದರು.

ಹೊಸಮಠ, ಕಲ್ಲುಕೊಪ್ಪಲು, ಮಠದಕೊಪ್ಪಲು, ಹಾರೋಹಳ್ಳಿ, ನವಿಲಹಳ್ಳಿ, ಬಡಗಿಕೊಪ್ಪಲು, ದಿಣ್ಣೆಕೊಪ್ಪಲು ಸೇರಿ ಹಲವು ಗ್ರಾಮಗಳ ಜನತೆ ಸಂಕಷ್ಟಕ್ಕೆ ಸಿಲುಕಿದ್ದು, ಗಣಿಗಾರಿಕೆ ಪರಿಣಾಮದಿಂದ ಪರಿಸರ ಹಾನಿಯೂ ಉಂಟಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಗಣಿಗಾರಿಕೆ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಗಂಗಾಧರ್, ವಿಠಲ, ದಾಸೇಗೌಡ, ಕವಿತಾ, ದಾಕ್ಷಾಯಿಣಿ, ಕೋಮಲಾ, ಲೋಲಾಕ್ಷಿ ಸೇರಿ ಗ್ರಾಮಸ್ಥರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-36-2016841437

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.