ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಾಸನದಲ್ಲಿ ಶೂಟೌಟ್‌: ಇಬ್ಬರ ಸಾವು; ಹತ್ಯೆಗೆ ರಿಯಲ್‌ ಎಸ್ಟೇಟ್‌ ವ್ಯವಹಾರ ಕಾರಣ?

Published 20 ಜೂನ್ 2024, 11:25 IST
Last Updated 20 ಜೂನ್ 2024, 11:25 IST
ಅಕ್ಷರ ಗಾತ್ರ

ಹಾಸನದ ಹೊಯ್ಸಳ ನಗರದಲ್ಲಿ ನಡೆದ ಶೂಟೌಟ್ ಘಟನೆಯಲ್ಲಿ ಮೃತಪಟ್ಟವರ ಗುರುತು ಪತ್ತೆಯಾಗಿದೆ. ಘಟನೆಗೆ ರಿಯಲ್ ಎಸ್ಟೇಟ್ ಜಗಳ ಕಾರಣ ಎನ್ನಲಾಗುತ್ತಿದೆ. ಬೆಂಗಳೂರಿನ ಆಸೀಫ್ ಮತ್ತು ಹಾಸನದ ಆಡುವಳ್ಳಿಯ ಶರಾಫತ್ ಅಲಿ ಮೃತರು. ಇವರಿಬ್ಬರೂ ಸ್ನೇಹಿತರಾಗಿದ್ದು ಶುಂಠಿ ಹಾಗೂ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು. ಮೃತ ಶರಾಪತ್ ಮೂಲತಃ ದೆಹಲಿಯವರಾಗಿದ್ದು, ಹಲವು ವರ್ಷಗಳಿಂದ ಹಾಸನದಲ್ಲಿ ವಾಸವಿದ್ದರು. ಇವರಿಬ್ಬರೂ ಮಧ್ಯಾಹ್ನ 12ರ ಸಮಯದಲ್ಲಿ ಕಾರಿನಲ್ಲಿ ಹೊಯ್ಸಳ ನಗರಕ್ಕೆ ಬಂದಿದ್ದರು. ನಂತರ ನಡೆದ ಗುಂಡಿನ ದಾಳಿಯ ಬಗ್ಗೆ ಇನ್ನೂ ಸ್ಪಷ್ಟತೆ ದೊರೆಯಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT