ಹಾಸನ: ನಗರದ ಕೆ.ಆರ್.ಪುರಂ ಗಂಧದಕೋಠಿ ಪ್ರದೇಶದಲ್ಲಿರುವ ಮಹಿಳಾ ಸರ್ಕಾರಿ ಕಾಲೇಜುಗಳ ಆವರಣದಲ್ಲಿ ಅನೈತಿಕ ಚಟುವಟಿಕೆಗಳು ಹೆಚ್ಚಾಗುತ್ತಿದ್ದು, ವಿದ್ಯಾರ್ಥಿನಿಯರ ಸುರಕ್ಷತೆಗೆ ಧಕ್ಕೆ ಉಂಟಾಗುತ್ತಿದೆ ಎಂದು ಆರೋಪಿಸಿದ ಸ್ಥಳೀಯರು, ಅಗತ್ಯ ಕ್ರಮವಹಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಈ ಪ್ರದೇಶದಲ್ಲಿ ಮಹಿಳಾ ವಿಭಜಿತ ಕಾಲೇಜು ಸೇರಿದಂತೆ ಎರಡು-ಮೂರು ಸರ್ಕಾರಿ ಮಹಿಳಾ ಕಾಲೇಜುಗಳು ಕಾರ್ಯನಿರ್ವಹಿಸುತ್ತಿದ್ದು, ಸುಮಾರು 5 ಸಾವಿರಕ್ಕೂ ಅಧಿಕ ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ಆದರೆ ಕಾಲೇಜು ಆವರಣ ಹಾಗೂ ಸುತ್ತಮುತ್ತ ಕೆಲ ಪುಂಡರು ಬೈಕ್ ಹಾಗೂ ಕಾರುಗಳಲ್ಲಿ ಜೋರಾಗಿ ಶಬ್ದ ಮಾಡುತ್ತಾ ಓಡಾಡುವುದು, ವಿದ್ಯಾರ್ಥಿನಿಯರನ್ನು ಚುಡಾಯಿಸುವುದು ಮತ್ತು ಅಸಭ್ಯವಾಗಿ ವರ್ತಿಸುವ ಘಟನೆಗಳು ನಡೆಯುತ್ತಿವೆ ಎಂದು ದೂರಿದರು.

ಸಂಜೆ ವೇಳೆಯಲ್ಲಿ ಕಾಲೇಜು ಆವರಣದಲ್ಲಿ ಗಾಂಜಾ ಸೇವನೆ, ಮದ್ಯಪಾನ ಹಾಗೂ ಬಿಯರ್ ಬಾಟಲಿ ಎಸೆಯುವ ಘಟನೆಗಳು ನಡೆಯುತ್ತಿವೆ. ಮದ್ಯಪಾನ ಮಾಡಿದ ಕೆಲವರು ಸುತ್ತಲಿನ ಮನೆಗಳ ಮೇಲೆ ಕಲ್ಲು ತೂರಿದ್ದಲ್ಲದೇ, ಅತಿವೇಗದಲ್ಲಿ ಬೈಕ್ ಚಲಾಯಿಸಿ ಅಪಾಯ ಸೃಷ್ಟಿಸಿರುವ ಘಟನೆಗಳೂ ವರದಿಯಾಗಿವೆ ಎಂದು ತಿಳಿಸಿದರು.

ಕಾಲೇಜಿಗೆ ಸೂಕ್ತ ಗೇಟ್ ಹಾಗೂ ಭದ್ರತಾ ವ್ಯವಸ್ಥೆಯ ಕೊರತೆಯಿಂದಾಗಿ ಸಾರ್ವಜನಿಕರು ಆವರಣವನ್ನು ರಸ್ತೆಯಂತೆ ಬಳಸುತ್ತಿದ್ದಾರೆ. ಇದರಿಂದ ಶೈಕ್ಷಣಿಕ ವಾತಾವರಣ ಹದಗೆಡುತ್ತಿದ್ದು, ವಿದ್ಯಾರ್ಥಿನಿಯರು ಮತ್ತು ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. ಕಾಲೇಜು ಆವರಣದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಿ, ಪೊಲೀಸ್ ಪೆಟ್ರೋಲಿಂಗ್ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಜಯೇಂದ್ರಕುಮಾರ್ ಜೈನ್, ತಿರುನಾರಾಯಣ ಅಯ್ಯಂಗಾರ್, ದಿನಕರ್, ಶೇಖರ್, ಮಹೇಶ್, ವಾಸು, ಕಲಾ ಕಾಲೇಜಿನ ಮಾಜಿ ಪ್ರಾಂಶುಪಾಲ ಮಹೇಂದ್ರ, ನಗರಸಭೆ ಮಾಜಿ ಸದಸ್ಯ ಸಂತೋಷ್, ಪ್ರಶಾಂತ್, ವಿನಯ್, ಪವನ್, ಸಂದೀಪ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-36-186858200

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.