ಹಾಸನ: ವಿದ್ಯಾರ್ಥಿಗಳು ತಮ್ಮ ಅಧ್ಯಯನದ ವೇಳೆಯಲ್ಲಿ ತಪಸ್ವಿಗಳಾಗಿರಬೇಕು. ಅಧ್ಯಯನ ಮತ್ತು ಅಧ್ಯಾಪನ ಇವೆರಡನ್ನು ಮೈಗೂಡಿಸಿಕೊಂಡಲ್ಲಿ ಭವಿಷ್ಯ ಸುಭದ್ರವಾಗುತ್ತದೆ ಎಂದು ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಬಾ.ನಂ. ಲೋಕೇಶ ಹೇಳಿದರು.

ನಗರದ ಅಂಬೇಡ್ಕರ್ ಭವನದಲ್ಲಿ ಬೆಸ್ಟ್ ಕಾಮರ್ಸ್ ಪದವಿ ಕಾಲೇಜಿನವರು ಈಚೆಗೆ ಏರ್ಪಡಿಸಿದ್ದ ಸಯೋನಾರ 2026 ಉದ್ಘಾಟಿಸಿ ಮಾತನಾಡಿದರು. ‘ಬೆಸ್ಟ್ ಕಾಮರ್ಸ್ ಕಾಲೇಜು ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಕಲೆ ಹಾಗೂ ಸ್ಕೌಟ್ಸ್ ಅಂಡ್ ಗೈಡ್ಸ್ ಇನ್ನಿತರೆ ವ್ಯಕ್ತಿತ್ವವನ್ನು ವಿಕಸಿತಗೊಳಿಸುವ ಕಾರ್ಯ ಮಾಡುತ್ತಿದ್ದಾರೆ’ ಎಂದರು.

‘ವಿದ್ಯಾರ್ಥಿಗಳು ಜ್ಞಾನದಾಹಿಗಳಾಗಬೇಕು. ಎಲ್ಲರಿಗೂ ಒಂದೇ ಸಮನಾದ ಬುದ್ಧಿಶಕ್ತಿ ಇರುತ್ತದೆ, ಬುದ್ದಿಯನ್ನು ಯಾರು ಹೆಚ್ಚು ಬಳಸಿಕೊಳ್ಳುತ್ತಾರೋ ಅವರು ಜೀವನದಲ್ಲಿ ಯಶಸ್ಸನ್ನು ಕಾಣುತ್ತಾರೆ. ಬಳಕೆ ಮಾಡಿಕೊಳ್ಳದ ವರು ಜೀವನದಲ್ಲಿ ವಿಫಲತೆ ಕಾಣುತ್ತಾರೆ. ಒಬ್ಬ ರೈತ ಬೆಳೆ ಬೆಳೆಯಲು ಒಂದು ವರ್ಷ ಹೇಗೆ ಕಷ್ಟಪಡುತ್ತಾರೋ ಹಾಗೆಯೇ ವಿದ್ಯಾರ್ಥಿಗಳು ವ್ಯಾಸಂಗದ ಅವಧಿಯಲ್ಲಿ ನಿಷ್ಠೆಯಿಂದ ವ್ಯಾಸಂಗ ಮಾಡಬೇಕು. ಆಗ ಮಾತ್ರ ಯಶಸ್ಸನ್ನು ಸಾಧಿಸಲು ಸಾಧ್ಯ’ ಎಂದರು.

ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಪಿ.ಎಸ್. ಮಂಜೇಗೌಡ ಮಾತನಾಡಿ, ‘ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಗುಣಗಳನ್ನು ಬೆಳೆಸಿಕೊಳ್ಳಬೇಕು. ಶಿಕ್ಷಣ ನಿಮ್ಮನ್ನು ವಿದ್ಯಾವಂತರನ್ನಾಗಿ ಮಾಡಿದರೆ ಒಳ್ಳೆಯ ಗುಣ ನಿಮ್ಮ ವ್ಯಕ್ತಿತ್ವವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತದೆ’ ಎಂದರು.

ಕಾಲೇಜಿನ ಕೋಶಾಧ್ಯಕ್ಷ ವೈ.ಎಚ್. ಈಶ್ವರ್ ಯಲಗುಂದ ಮಾತನಾಡಿ, ‘ನಮ್ಮ ಕಾಲೇಜಿನಲ್ಲಿ ಪ್ರತಿ ವರ್ಷ ಅಂತರ ಕಾಲೇಜು ಮಟ್ಟದ ಹಾಗೂ ವಿಶ್ವವಿದ್ಯಾಲಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಬಾಚುವುದರೊಂದಿಗೆ ಶಿಕ್ಷಣದ ಜೊತೆ ಕ್ರೀಡೆಯಲ್ಲಿಯೂ ಮುಂದಿದ್ದಾರೆ. ಹಾಸನಾಂಬ ಜಾತ್ರಾ ಮಹೋತ್ಸವದಲ್ಲಿ ಸ್ವಯಂಸೇವಕರಾಗಿ ನಮ್ಮಲ್ಲಿರುವ ಭಾರತ್ ಸ್ಕೌಟ್ ಅಂಡ್ ಗೈಡ್ಸ್ ತಂಡ ಸಾಮಾಜಿಕ ಸೇವಾ ಕೆಲಸಗಳಲ್ಲಿ ತೊಡಗುತ್ತದೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ನವೀನ್ ಕೆ.ಸಿ. ಮಾತನಾಡಿ, ‘ಉತ್ತಮ ಶಿಕ್ಷಣ ಎಲ್ಲಿ ದೊರೆಯುತ್ತದೆಯೋ ಅಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆಯು ಕೂಡ ಹೆಚ್ಚಾಗುತ್ತದೆ. ಇಲ್ಲಿನ ವಿದ್ಯಾರ್ಥಿಗಳು ಒಂದಿಲ್ಲೊಂದು ಉದ್ಯೋಗ ಮಾಡುತ್ತ ತಮ್ಮ ಜೀವನವನ್ನು ಕಟ್ಟಿಕೊಂಡಿದ್ದಾರೆ’ ಎಂದರು.

ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆದವು. ಆಡಳಿತಾಧಿಕಾರಿಗಳಾದ ಡಾ.ನಿತ್ಯಾನಂದ, ಡಾ.ವಿಕ್ರಂ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-36-1373573680

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.