ಹಾಸನ: ಡಾ. ವೀರಭದ್ರಪ್ಪ ಅವರ ‘ಬಾಳಪಯಣ’ ಪುಸ್ತಕ ಬಿಡುಗಡೆ ಜೂನ್ 24ರಂದು ನಗರದ ಕಲಾಭವನದಲ್ಲಿ ನಡೆಸಲು ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಸುತ್ತೂರು ಶ್ರೀಗಳು, ವಿಶ್ವ ಒಕ್ಕಲಿಗರ ಮಠದ ಸ್ವಾಮೀಜಿ, ಆದಿಚುಂಚನಗಿರಿ ಮಠದ ಸ್ವಾಮೀಜಿ, ಕೋಡಿಮಠದ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರ ಸಾನಿಧ್ಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯ ಹಾಗೂ ಸಂಸದ ಶ್ರೇಯಸ್ ಪಟೇಲ್ ಉದ್ಘಾಟಿಸಲಿದ್ದಾರೆ. ಶಾಸಕ ಸ್ವರೂಪ್ ಪ್ರಕಾಶ್ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲೆಯ ಹಲವು ಪ್ರಮುಖರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಭೆಯಲ್ಲಿ ತಿಳಿಸಲಾಯಿತು.

ವೀರಶೈವ ಲಿಂಗಾಯತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಪಿ. ಐಸಾಮಿಗೌಡ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎಚ್.ಎಲ್. ಮಲ್ಲೇಶ್ ಗೌಡ, ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಕೆ. ಮಂಜುನಾಥ್, ಪತ್ರಕರ್ತರಾದ ಆರ್.ಪಿ. ವೆಂಕಟೇಶ್ ಮೂರ್ತಿ, ಲೀಲಾವತಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಸನ ತಾಲ್ಲೂಕು ಘಟಕದ ಅಧ್ಯಕ್ಷ ಕಟ್ಟಾಯ ಶಿವಕುಮಾರ್, ದರಪಣಾ ಗೋಪಾಲ್, ಪುಸ್ತಕದ ಲೇಖಕಿ ಶಿಕ್ಷಕಿ ಬಿ.ಎಸ್. ವನಜಾಕ್ಷಿ, ಜಯಾ ರಮೇಶ್, ಪುಟ್ಟಸ್ವಾಮಿಗೌಡ, ಗ್ಯಾರಂಟಿ ರಾಮಣ್ಣ ಸಭೆಯಲ್ಲಿ ಉಪಸ್ಥಿತರಿದ್ದರು.

ಪುಸ್ತಕ ಬಿಡುಗಡೆ ಕಾರ್ಯಕ್ರಮದ ರೂಪುರೇಷೆ ಕುರಿತು ಚರ್ಚಿಸಲು ಜೂನ್ 6ರಂದು ಸಂಜೆ 5 ಗಂಟೆಗೆ ಕನ್ನಡ ಸಾಹಿತ್ಯ ಭವನದಲ್ಲಿ ಮತ್ತೊಂದು ಸಭೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-51-823551643

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.