ಹಾಸನ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಅಚ್ಚುಕಟ್ಟಾಗಿ ಮಾಡುವಂತೆ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ತಿಳಿಸಿದರು.

ಮಲೆನಾಡು ಎಂಜಿನಿಯರಿಂಗ್ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ಎಸ್ಐಆರ್ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು ತರಬೇತಿಯಲ್ಲಿ ಹೇಳಿರುವ ಅಂಶಗಳನ್ನು ಗಮನದಲ್ಲಿ ಇಟ್ಟುಕೊಂಡು ಬಿಎಲ್ಒಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಮತದಾರರು ಭರ್ತಿ ಮಾಡಿ ನೀಡಿದ ನಮೂನೆಗಳನ್ನು ವಿಳಂಬವಾಗದಂತೆ ಅಪ್ಲೋಡ್ ಮಾಡಲು ನಿಗಾ ವಹಿಸಬೇಕು. ಚುನಾವಣಾ ಆಯೋಗದ ನಿರ್ದೇಶನದಂತೆ ಪ್ರಜೆಯು ಮತದಾನದಿಂದ ವಂಚಿತರಾಗದಂತೆ ಮತದಾರರ ಪಟ್ಟಿ ತಯಾರಿಸಲು ಗಮನಹರಿಸಬೇಕು ಎಂದು ತಿಳಿಸಿದರು.

ಪ್ರಜಾ ಪ್ರಾತಿನಿಧ್ಯ ಕಾಯ್ದೆ ಅಡಿಯಲ್ಲಿ ಮತದಾರರ ಪಟ್ಟಿ ತಯಾರಿಸುವುದು ಶಾಸನಬದ್ಧ ಕರ್ತವ್ಯ. ವಿಶೇಷ ಸಮಗ್ರ ಪರಿಷ್ಕರಣೆಗೆ ಈಗಾಗಲೇ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆ ಎಂದರು.

ಜೂನ್ 30 ರಿಂದ ಜುಲೈ 29 ವರೆಗೆ ಬಿಎಲ್ಒಗಳು ಮನೆಗಳಿಗೆ ಭೇಟಿ ನೀಡಿ, ತಮ್ಮ ಹೆಸರು ಮತ್ತಿತರ ಮಾಹಿತಿ ದಾಖಲಾಗಿರುವ ನಮೂನೆಯನ್ನು ದ್ವಿ ಪ್ರತಿಯಲ್ಲಿ ನೀಡುತ್ತಾರೆ. ಮತದಾರರು ಮಾಹಿತಿಯನ್ನು ಭರ್ತಿ ಮಾಡಿ, ಪಾಸ್ ಪೋರ್ಟ್ ಅಳತೆಯ ಪೋಟೊವನ್ನು ಅಂಟಿಸಿ, ಕಡ್ಡಾಯವಾಗಿ ಸಹಿ ಮಾಡಿ ನೀಡಬೇಕು. ಆ ಪ್ರತಿಯನ್ನು ಆನ್ಲೈನ್ನಲ್ಲಿ ಅಪ್ಲೋಡ್ ಮಾಡುವಂತೆ ತಿಳಿಸಿದರು.

ಪೂರ್ವ ತಯಾರಿಯಾಗಿ ಮತಗಟ್ಟೆ ಅಧಿಕಾರಿಗಳು ಹಾಗೂ ಮತಗಟ್ಟೆ ಏಜೆಂಟರಿಗೆ ತರಬೇತಿ ನೀಡಲಾಗುವುದು. ಪರಿಷ್ಕರಣೆ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯುತ್ತಿದೆ ಎಂದು ನೋಡಲು ಏಜೆಂಟರಿಗೆ ಅವಕಾಶವಿದೆ. ಮತಗಟ್ಟೆ ಅಧಿಕಾರಿಯ ಬದಲಾವಣೆಗೆ ಅವಕಾಶ ಇರುವುದಿಲ್ಲ.ಜನರು ಸಹಾಯವಾಣಿ ಸಂಖ್ಯೆ 1950 ರ ಸದುಪಯೋಗ ಪಡೆಯಬಹುದು ಎಂದರು. ತಹಶೀಲ್ದಾರ್ ಗೀತಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-36-2091039811

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.