ಹಾಸನ: ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಸಿ ಕಸ ಮತ್ತು ಒಣ ಕಸವನ್ನು ಕಡ್ಡಾಯವಾಗಿ ಬೇರ್ಪಡಿಸಿ ವಾಹನಗಳಿಗೆ ನೀಡುವ ಕುರಿತು ಸಾರ್ವಜನಿಕರಿಗೆ ಹೆಚ್ಚಿನ ತಿಳಿವಳಿಕೆ ನೀಡಬೇಕು ಎಂದು ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ವಿವಿಧ ವಿಷಯಗಳ ಕುರಿತಾ ಸಭೆಯಲ್ಲಿ ಮಾತನಾಡಿದ ಅವರು, ತ್ಯಾಜ್ಯವನ್ನು ರಸ್ತೆಬದಿಯಲ್ಲಿ ಮತ್ತಿತರ ಸ್ಥಳಗಳಲ್ಲಿ ವಿಲೇವಾರಿ ಮಾಡುವವರನ್ನು ಗುರುತಿಸಿ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದರು.

‘ತ್ಯಾಜ್ಯ ವಿಲೇವಾರಿ ವ್ಯವಸ್ಥಿತವಾಗಿ ಆಗಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಎಸೆಯದಂತೆ ಅರಿವು ಮೂಡಿಸಲು ಹೆಚ್ಚಿನ ಐಇಸಿ ಚಟುವಟಿಕೆ ಏರ್ಪಡಿಸಬೇಕು. ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು. ಮುಂಜಾಗ್ರತೆ ವಹಿಸಿ ಸಿದ್ಧತೆ ಕ್ಯೆಗೊಳ್ಳಬೇಕು. ನಗರಗಲ್ಲಿ ಫುಟ್ಪಾತ್ ತೆರವುಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಮೊದಲ ಆದ್ಯತೆ ನೀಡಬೇಕು’ ಎಂದು ಸೂಚಿಸಿದರು.

‘ಉದ್ಯಾನಗಳಲ್ಲಿ ಹೆಚ್ಚಿನ ಗಿಡಮರಗಳನ್ನು ಬೆಳೆಸಲು ಕ್ರಮ ಕೈಗೊಳ್ಳಬೇಕು. ನಗರಗಳಲ್ಲಿ ಪಾರ್ಕಿಂಗ್ ಸ್ಥಳ ನಿಗದಿ ಪಡಿಸಿ ಪಾರ್ಕಿಂಗ್ಗೆ ಅವಕಾಶ ಕಲ್ಪಿಸಬೇಕು. ಜಿಲ್ಲೆಯಲ್ಲಿನ ಪ್ರವಾಸಿ ಸ್ಥಳಗಳಲ್ಲಿ ಹಿರಿಯ ನಾಗರಿಕರಿಗೆ, ಮಹಿಳೆಯರಿಗೆ, ಅಂಗವಿಕಲರಿಗೆ ಶೌಚಾಲಯ ನಿರ್ಮಾಣ ಆಗಬೇಕು. ಎಲ್ಲ ರೀತಿಯ ಅನುಕೂಲ ಇರುವಂತೆ ನೋಡಿಕೊಳ್ಳಬೇಕು’ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣಮೂರ್ತಿ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಬಲರಾಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಿಲ್ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-36-156015441

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.