ಹಾಸನ: ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರಿಗೆ ಕುಡಿಯುವ ನೀರಿನಲ್ಲಿ ಯಾವುದೇ ರೀತಿ ಸಮಸ್ಯೆ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಶಾಸಕ ಸ್ವರೂಪ್ ಪ್ರಕಾಶ್, ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಿಸಿಲಿನ ಮಟ್ಟ ಹೆಚ್ಚಾಗುತ್ತಿರುವುದರಿಂದ ಆರೋಗ್ಯ ಇಲಾಖೆ ವತಿಯಿಂದ ಜಾಗೃತಿ ಕಾರ್ಯಕ್ರಮ ನಡೆಸಬೇಕು. ಸಾರ್ವಜನಿಕರು ಯಾವ ರೀತಿಯ ಆಹಾರ ಸೇವಿಸಬೇಕು? ಆರೋಗ್ಯದ ಬಗ್ಗೆ ಯಾವ ರೀತಿ ಕಾಳಜಿ ವಹಿಸಬೇಕು ಎಂಬುದರ ಬಗ್ಗೆ ಪ್ರಚಾರ ಕೈಗೊಳ್ಳಬೇಕು. ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸುವಂತೆ ತಿಳಿಸಬೇಕು ಎಂದು ಹೇಳಿದರು.

ತಾಲ್ಲೂಕಿನ ಎಲ್ಲ ಆಸ್ಪತ್ರೆಗಳಿಗೆ ಭೇಟಿ ನೀಡಿ, ಯಾವ ಚಿಕಿತ್ಸೆಗೆ ಎಷ್ಟು ಹಣ ಎಂಬುದನ್ನು ಫಲಕಗಳಲ್ಲಿ ಅಳವಡಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಆಲೂಗಡ್ಡೆ, ತರಕಾರಿ ಸೇರಿದಂತೆ ಇನ್ನಿತರ ಬೆಳೆಗಳನ್ನು ಬೆಳೆಯಲು ರೈತರಿಗೆ ಪ್ರೋತ್ಸಾಹಿಸಬೇಕು. ವಿವಿಧ ಬೆಳೆಗಳನ್ನು ಬೆಳೆಯುವ ಬಗ್ಗೆ ಆಕಾಶವಾಣಿ ಮೂಲಕ ಪ್ರಚಾರ ಕೈಗೊಳ್ಳುವಂತೆ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಪುರದಮ್ಮ ದೇವಸ್ಥಾನದ ರಸ್ತೆ ಕಿರಿದಾಗಿದ್ದು, ರಸ್ತೆ ನಿರ್ಮಾಣಕ್ಕೆ ಅರಣ್ಯ ಇಲಾಖೆಯಿಂದ ಅದಷ್ಟು ಬೇಗ ಅನುಮತಿ ಪಡೆದು, ರಸ್ತೆ ಕಾಮಗಾರಿಗೆ ಅವಕಾಶ ಮಾಡಿಕೊಡುವಂತೆ ಹೇಳಿದರು.

ವಸತಿ ಶಾಲೆಗಳಲ್ಲಿ ಕುಡಿಯುವ ನೀರಿನಲ್ಲಿ ವ್ಯತ್ಯಯ ಆಗದಂತೆ ನೋಡಿಕೊಳ್ಳಿ. ರ್ಯಾಗಿಂಗ್ನಂತಹ ಅಸಭ್ಯ ವರ್ತನೆಗಳಿಗೆ ನಡೆಯದಂತೆ ನೋಡಿಕೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಇತ್ತೀಚೆಗೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ರಸ್ತೆಯಲ್ಲಿ ಓಡಾಡಲು ಭಯ ಪಡುವಂತಾಗಿದೆ. ನಾಯಿಗಳ ಹಾವಳಿ ತಡೆಗಟ್ಟುವಿಕೆಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2024-25 ಸಾಲಿನ ಸಹಾಯಧನ ಯೋಜನೆಯಡಿಯಲ್ಲಿ ಆಯ್ಕೆಯಾದ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ ಮಾಡಿದರು.

ತಹಶೀಲ್ದಾರ್ ಗೀತಾ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗಿರೀಶ್ ಎಚ್.ಡಿ., ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-36-1283424810

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.