ಹಾಸನ: ‘ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಹಂಗರಹಳ್ಳಿಯಲ್ಲಿ ನಡೆದ ಯುವಕನ ಅಪಹರಣ, ಕೊಲೆ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ ತಿಳಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯುವಕ ವರುಣ್ ಕೆ.ಎಂ.ನನ್ನು ಅಪಹರಿಸಿ, ಎರಡು ದಿನಗಳ ಕಾಲ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸತೀಶ್, ಉಮರ್, ವಿಜಯ ನಾಯಕ್, ಚೇತನ್ (ದಾಸರಕೊಪ್ಪಲು) ಹಾಗೂ ಮನು ಅವರನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳಿಗಾಗಿ ಶೋಧ ಮುಂದುವರಿದಿದೆ’ ಎಂದರು.

ಪ್ರಕರಣದ ಪ್ರಮುಖ ಆರೋಪಿ ಶಶಾಂಕ್, ವರುಣ್ಗೆ ₹7 ಸಾವಿರ ನೀಡಿದ್ದು, ಅದನ್ನು ವಾಪಸ್ ನೀಡದ್ದರಿಂದ ಉಂಟಾದ ಮನಸ್ತಾಪವೇ ಕೊಲೆಗೆ ಕಾರಣವಾಗಿರಬಹುದು ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಹೇಳಿದರು.

‘ಮಾರ್ಚ್ 10ರಂದು ಬೈಕ್ ದುರಸ್ತಿ ಮಾಡಿಸಿಕೊಂಡು ಬರುತ್ತೇನೆ ಎಂದು ತಾಯಿಗೆ ಹೇಳಿ ಮನೆಯಿಂದ ಹೊರಟಿದ್ದ ವರುಣ್ ಮನೆಗೆ ಮರಳಿರಲಿಲ್ಲ. ಅದೇ ದಿನ ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ವರುಣ್ ಮತ್ತು ಆತನ ಸ್ನೇಹಿತ ಲೋಹಿತ್ ಅವರನ್ನು ದುಷ್ಕರ್ಮಿಗಳು ಕರೆದುಕೊಂಡು ಹೋಗಿ, ಹಾಸನ ತಾಲ್ಲೂಕಿನ ಹಂಗರಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ಬಂಧಿಸಿ ಹಲ್ಲೆ ನಡೆಸಿದ್ದರು. ಮಾ.11ರಂದು ಮಧ್ಯಾಹ್ನ ನಿರಂತರ ಹಲ್ಲೆಯಿಂದ ವರುಣ್ ಮೃತಪಟ್ಟಿದ್ದ’ ಎಂದು ವಿವರಿಸಿದರು.

‘ಈ ಮಧ್ಯೆ ವರುಣ್ ಸ್ನೇಹಿತ ಲೋಹಿತ್ ಅಲ್ಲಿಂದ ತಪ್ಪಿಸಿಕೊಂಡು ಬಂದು ಗ್ರಾಮಸ್ಥರಿಗೆ ವಿಷಯ ತಿಳಿಸಿದ್ದ. ಅಷ್ಟರಲ್ಲಿಯೇ ಆರೋಪಿಗಳು ಮೃತದೇಹವನ್ನು ಹಂಗರಹಳ್ಳಿಯಿಂದ ಗುಂಡೇಗೌಡನ ಕೊಪ್ಪಲಿಗೆ ಸಾಗಿಸಿ, ಎರಡು ದಿನಗಳ ಕಾಲ ಒಂದು ಕೊಠಡಿಯಲ್ಲಿ ಇಟ್ಟಿದ್ದರು. ಮಾ. 13ರಂದು ಅರಸೀಕೆರೆ ತಾಲ್ಲೂಕಿನ ಜೇನುಕಲ್ ಬೆಟ್ಟದ ತಪ್ಪಲಿನಲ್ಲಿ ಸುಟ್ಟು ಹಾಕಿದ್ದಾರೆ. ವರುಣ್ ತಾಯಿ ಮಾ. 15ರಂದು ಗಂಡಸಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಮಾರ್ಚ್ 19ರಂದು ಸುಟ್ಟ ಸ್ಥಿತಿಯಲ್ಲಿದ್ದ ಮೃತದೇಹ ಪತ್ತೆಯಾಗುತ್ತಿದ್ದಂತೆ ಕೊಲೆ ಪ್ರಕರಣ ದಾಖಲಾಗಿದೆ’ ಎಂದರು.

ಬಂಧಿತ ಆರೋಪಿಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳ ದಾಖಲೆ ಇಲ್ಲ. ಆದರೆ, ಗಾಂಜಾ ಸೇವನೆ ಕುರಿತು ಮಾಹಿತಿ ಲಭ್ಯವಾಗಿದ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಶಶಾಂಕ್, ಗಾಂಜಾ ಪೆಡ್ಲರ್ ಎಂದು ಮಾಹಿತಿ ಲಭ್ಯವಾಗಿದೆ ವಿವರಿಸಿದರು.

ಎಸ್ಎಫ್ಎಲ್ ವರದಿ ಬಂದ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-36-1411931371

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.