ಹಾಸನ: ರಾಜ್ಯ ಕೌಶಲ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳ ಆಶ್ರಯದಲ್ಲಿ ಮಾ. 7ರಂದು ಯುವ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು.

ನಗರದ ತಮ್ಮ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದ್ಯೋಗ ಮೇಳದಲ್ಲಿ ಸುಮಾರು 100ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಹಾಗೂ ಕೈಗಾರಿಕಾ ಸಂಸ್ಥೆಗಳು ಭಾಗವಹಿಸಲಿದ್ದು, 10 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಾಗಲಿವೆ ಎಂದು ಹೇಳಿದರು.

ಮಾರ್ಚ್ 7ರಂದು ಬೆಳಿಗ್ಗೆ 9.30ರಿಂದ ಸಂಜೆ 5 ಗಂಟೆಯವರೆಗೆ ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಮೇಳ ನಡೆಯಲಿದೆ. ಎಸ್ಎಸ್ಎಲ್ಸಿಯಿಂದ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್ಲೈನ್ ಮತ್ತು ಆಫ್ಲೈನ್ ಎರಡೂ ಮಾಧ್ಯಮಗಳ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ವಿವರಿಸಿದರು.

ಜಿಲ್ಲೆಯ ಜೊತೆಗೆ ನೆರೆ ಜಿಲ್ಲೆಗಳ ಉದ್ಯೋಗ ಆಕಾಂಕ್ಷಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಆಶಾದಾಯಕ ರಾಜ್ಯ ಬಜೆಟ್ ನಿರೀಕ್ಷೆ: ಮಂಡನೆಯಾಗಲಿರುವ ರಾಜ್ಯ ಬಜೆಟ್ ಕುರಿತು ಮಾತನಾಡಿದ ಅವರು, ಜಿಲ್ಲೆಗೆ ವಿಮಾನ ನಿಲ್ದಾಣ, ನೂತನ ಜಿಲ್ಲಾಧಿಕಾರಿ ಕಚೇರಿ, ಹೈಟೆಕ್ ಆಸ್ಪತ್ರೆ, ಆನೆ ಹಾವಳಿ ನಿಯಂತ್ರಣ ಸೇರಿದಂತೆ ಅಗತ್ಯ ಮೂಲಸೌಕರ್ಯಗಳಿಗೆ ಸಮರ್ಪಕ ಅನುದಾನ ದೊರೆಯುವ ನಿರೀಕ್ಷೆಯಿದೆ ಎಂದರು.

ಮೂರು ವರ್ಷಗಳಿಂದ ಯಶಸ್ವಿ ಆಡಳಿತ ನೀಡಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದಿಂದ ಈ ಬಾರಿ ರೈತರು ಹಾಗೂ ಬಡವರ ಪರವಾದ ಆಶಾದಾಯಕ ಬಜೆಟ್ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260305-36-333327687

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.