ಹಾಸನ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್. ಪೂರ್ಣಿಮಾ ಅವರನ್ನು ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರ, ಅವರ ಜಾಗಕ್ಕೆ ಶುಭಂ ಶುಕ್ಲಾ ಅವರನ್ನು ನಿಯೋಜನೆ ಮಾಡಿದೆ.

2022ನೇ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಶುಭಂ ಶುಕ್ಲಾ ಹಾವೇರಿ ಉಪ ವಿಭಾಗಾಧಿಕಾರಿ ಹುದ್ದೆಯಿಂದ ಹಾಸನ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ವರ್ಗಾವಣೆಯಾಗಿದ್ದು, ಬುಧವಾರ ಅಧಿಕಾರ ವಹಿಸಿಕೊಂಡರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಹಾಗೂ ಅಭಿವೃದ್ಧಿಗೆ ಹೆಚ್ಚಿನ ಒತ್ತು, ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು. ಜಿಪಂ ವ್ಯಾಪ್ತಿಯಲ್ಲಿ ಎಲ್ಲ ರೀತಿಯ ಪ್ರಗತಿ ಸೇರಿದಂತೆ ಪಂಚಾಯತ್ ರಾಜ್ ವ್ಯಾಪ್ತಿಯಲ್ಲಿ ಉತ್ತಮ ಕೆಲಸ ಮಾಡುವ ಆಸೆ ಇದೆ. ಅದನ್ನು ಕಾರ್ಯಗತಗೊಳಿಸುತ್ತೇನೆ ಎಂದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಈಗಾಗಲೇ ಸರ್ಕಾರದ ಕಡೆಯಿಂದ ಎಲ್ಲ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಉಪ ವಿಭಾಗಾಧಿಕಾರಿಗಳಿಗೆ ಮಾರ್ಗದರ್ಶನ ಬಂದಿದೆ. ಎಲ್ಲೂ ಕುಡಿಯುವ ನೀರಿನ ಸಮಸ್ಯೆ ಕಾಡಬಾರದು ಎಂಬ ಸೂಚನೆ ಸಿಕ್ಕಿದೆ ಎಂದರು.

ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಟಾಸ್ಕ್ಫೋರ್ಸ್ ಇದೆ. ಅದರ ಮೂಲಕ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲೂ ಟಾಸ್ಕ್ಫೋರ್ಸ್ ರಚಿಸಿ ಚರ್ಚಿಸಲಾಗುವುದು. ಸರ್ಕಾರದ ಮಾರ್ಗದರ್ಶನ, ನಿಯಮಾವಳಿ ಪ್ರಕಾರ ಖಾಸಗಿ ಬೋರ್ವೆಲ್ಗಳು ಅಥವಾ ಟ್ಯಾಂಕರ್ಗಳ ಮೂಲಕ ನೀರು ಪೂರೈಸಲಾಗುವುದು. ಜಿಲ್ಲೆಯ ಯಾವುದೇ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರಬಾರದು. ಶೇ 100ರಷ್ಟು ನೀರು ದೊರೆಯಬೇಕು. ಇದು ನಮ್ಮ ಗುರಿ. ರಾಜ್ಯ ಸರ್ಕಾರವೂ ಅದನ್ನೇ ಹೇಳಿದೆ. ಆ ನಿಟ್ಟಿನಲ್ಲಿ ಎಲ್ಲ ರೀತಿಯಲ್ಲೂ ಶ್ರಮಿಸುತ್ತೇನೆ ಎಂದು ವಿವರಿಸಿದರು.

ಜಿಲ್ಲಾಡಳಿತ ಹಾಗೂ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳೊಂದಿಗೆ ಸಮನ್ವಯ ಸಾಧಿಸಿ, ಎಲ್ಲರ ಸಹಕಾರದಿಂದ ಒಳ್ಳೆಯ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-36-390907525

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.