ಹಾಸನ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶುಭಂ ಶುಕ್ಲಾ ಮಂಗಳವಾರ ಸಕಲೇಶಪುರ ತಾಲ್ಲೂಕಿನ ಹಾನುಬಾಳು ಹಾಗೂ ಹಲಸುಲಿಗೆ ಗ್ರಾಮ ಪಂಚಾಯಿತಿಗಳಿಗೆ ಕ್ಷೇತ್ರ ಭೇಟಿ ನೀಡಿದರು. ನರೇಗಾ, ಇತರೆ ಯೋಜನೆಗಳಡಿ ಅನುಷ್ಠಾನಗೊಂಡ ಕಾಮಗಾರಿಗಳನ್ನು ಪರಿಶೀಲಿಸಿದರು.

ಹಲಸುಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಆರ್ಐಡಿಎಲ್ ವತಿಯಿಂದ 5054 ಅನುದಾನದಡಿ ಯೋಜನೆಯಡಿ ಅನುಷ್ಠಾನಗೊಂಡ ಕಾಂಕ್ರೀಟ್ ರಸ್ತೆ, ಚರಂಡಿ ಕಾಮಗಾರಿಗಳನ್ನು ಪರಿಶೀಲಿಸಿದರು.

ನರೇಗಾ ಯೋಜನೆಯಡಿ ಅನುಷ್ಠಾನಗೊಂಡ ಚರಂಡಿ ಕಾಮಗಾರಿಯನ್ನು ಪರಿಶೀಲಿಸಿದರು.

ತೆರೆದ ಬಾವಿ, ಅಡಿಕೆ ಸಸಿ ನಾಟಿ ಮುಂತಾದ ಕಾಮಗಾರಿ ಅನುಷ್ಠಾನ ಮಾಡಿಕೊಂಡ ವೈಯಕ್ತಿಕ ಫಲಾನುಭವಿಗಳೊಂದಿಗೆ ಸಮಾಲೋಚಿಸಿದರು.

ಹಾನುಬಾಳು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಗೆ ಭೇಟಿ ನೀಡಿ, ಮಧ್ಯಾಹ್ನದ ಬಿಸಿಯೂಟ ಯೋಜನೆ, ಶೌಚಾಲಯ ವ್ಯವಸ್ಥೆ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮುಂತಾದ ವಿಷಯಗಳ ಬಗ್ಗೆ ಪರಿಶೀಲಿಸಿ, ಶಾಲೆಯ ಮುಖ್ಯ ಶಿಕ್ಷಕರು, ಮಕ್ಕಳು, ಸ್ಥಳೀಯರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿದರು.ಮಕ್ಕಳೊಂದಿಗೆ ಊಟ ಮಾಡಿ, ಬಿಸಿಯೂಟ ಅಡುಗೆ ಸಿಬ್ಬಂದಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ, ಪ್ರತಿ ಮನೆಗಳಿಂದ ಸಂಗ್ರಹಿಸಿದ ತ್ಯಾಜ್ಯವನ್ನು ವಿಲೇವಾರಿ ಮಾಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಕೆಆರ್ಐಡಿಎಲ್ ಕಾರ್ಯಪಾಲಕ ಎಂಜಿನಿಯರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ, ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-36-2017155841

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.