ಹಾಸನ: ಜಗಜ್ಯೋತಿ ಬಸವೇಶ್ವರರ ಜಯಂತಿ ಅಂಗವಾಗಿ ಏಪ್ರಿಲ್ 20ರಂದು ನಗರದಲ್ಲಿ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ವೀರಶೈವ ಲಿಂಗಾಯತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಪಿ. ಐಸಾಮಿಗೌಡ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 6 ಗಂಟೆಯಿಂದ ಅರಳೇಪೇಟೆಯ ಬಸವೇಶ್ವರ ದೇವಸ್ಥಾನದಲ್ಲಿ ರುದ್ರಾಭಿಷೇಕ, ಮಹಾಪೂಜೆ ಹಾಗೂ ಮಹಾಮಂಗಳಾರತಿ ಕಾರ್ಯಕ್ರಮಗಳು ನಡೆಯಲಿವೆ. ಬೆಳಿಗ್ಗೆ 9.30 ಗಂಟೆಗೆ ಬಸವೇಶ್ವರಸ್ವಾಮಿಯ ರಥೋತ್ಸವ ನಡೆಯಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಬೆಳ್ಳಿ ರಥದಲ್ಲಿ ಬಸವೇಶ್ವರರ ಭಾವಚಿತ್ರವನ್ನು ಇರಿಸಿ, ವಿವಿಧ ಕಲಾ ತಂಡಗಳು ಹಾಗೂ ವಾದ್ಯಗೋಷ್ಠಿಗಳೊಂದಿಗೆ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಹಾಸನಾಂಬ ಕಲಾಕ್ಷೇತ್ರವನ್ನು ತಲುಪಲಿದೆ ಎಂದರು.

ನಂತರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಬಸವ ಜಯಂತಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಬಳಿಕ ದೇವಸ್ಥಾನ ಆವರಣದಲ್ಲಿ ಬಸವ ಜಯಂತಿ ಆಚರಣಾ ಸಮಿತಿಯಿಂದ ಭಕ್ತರಿಗೆ ಪ್ರಸಾದ ವಿತರಣೆ ಏರ್ಪಡಿಸಲಾಗಿದೆ ಎಂದರು.

ಈ ಕಾರ್ಯಕ್ರಮಗಳನ್ನು ವೀರಶೈವ-ಲಿಂಗಾಯತ ಸಂಘದ ಹಾಸನ ಜಿಲ್ಲಾ ಘಟಕ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಸಂಘದ ಗೌರವ ಕಾರ್ಯದರ್ಶಿ ಈ.ಎಂ. ರುದ್ರಕುಮಾರ್, ಉಪಾಧ್ಯಕ್ಷ ಕಿರಣ್ ಕುಮಾರ್ ಹೊಸಮನಿ, ಎಚ್. ಮಲ್ಲಿಕಾರ್ಜುನ, ಎ.ಜೆ. ಶೋಭನ್ ಬಾಬು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-36-802020879

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.