ಹಾಸನ: ಕಟ್ಟಾಯ ಹೋಬಳಿ ನಾಡಕಚೇರಿಯಲ್ಲಿ ಮಹಿಳಾ ಗ್ರಾಮ ಲೆಕ್ಕಾಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆಗಿನ ಕಂದಾಯ ನಿರೀಕ್ಷಕ ಮೋಹನ್ಕುಮಾರ್ ಬಿ. ಅವರಿಗೆ ಇಲ್ಲಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ದಂಡ ವಿಧಿಸಿದೆ.

2016ರ ಡಿಸೆಂಬರ್ 16ರಂದು ಈ ಘಟನೆ ನಡೆದಿತ್ತು. ಅಂದು ಸಂಜೆ ಕಡತಗಳನ್ನು ಪರಿಶೀಲಿಸುವ ನೆಪದಲ್ಲಿ ಮಹಿಳಾ ಗ್ರಾಮ ಲೆಕ್ಕಾಧಿಕಾರಿಯನ್ನು ನಾಡಕಚೇರಿಯ ತಮ್ಮ ಕೊಠಡಿಗೆ ಕರೆಯಿಸಿಕೊಂಡಿದ್ದಮೋಹನ್ಕುಮಾರ್, ಆಕೆಗೆ ಲೈಂಗಿಕ ಕಿರುಕುಳ ನೀಡಿ, ಮಾನಭಂಗ ಮಾಡಲು ಪ್ರಯತ್ನಿಸಿದ್ದರು.

ಈ ಬಗ್ಗೆ ಗೊರೂರು ಠಾಣೆಯಲ್ಲಿ ಸಂತ್ರಸ್ತೆ ದೂರು ಸಲ್ಲಿಸಿದ್ದರು. ಪರಿಶಿಷ್ಟ ಜಾತಿ, ಪಂಗಡ ದೌರ್ಜನ್ಯ ಕಾಯ್ದೆ, ಲೈಂಗಿಕ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಇಲ್ಲಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಶೈಲಾ ಬಿ.ಎಂ. ಅವರು, ಸಾಕ್ಷಿದಾರರ ಹೇಳಿಕೆ ಹಾಗೂ ವಾದ– ವಿವಾದ ಆಲಿಸಿದ ನಂತರ ಆರೋಪಿ ಮೋಹನ್ ಕುಮಾರ ಬಿ. ಅವರಿಂದ ₹25ಸಾವಿರ ಮುಚ್ಚಳಿಗೆ ಬಾಂಡ್ ಪಡೆದು, 2 ವರ್ಷಗಳ ಕಾಲ ಸನ್ನಡತೆ ಹಾಗೂ ಶಾಂತಿ ಕಾಪಾಡುವಂತೆ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ₹20ಸಾವಿರ ದಂಡ ವಿಧಿಸಿ, ಈ ಮೊತ್ತವನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡುವಂತೆ ಆದೇಶಿಸಿದ್ದಾರೆ.

ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಎಚ್.ಕೆ. ಸುರೇಶ್ ವಾದ ಮಂಡಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-36-945189482

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.