ಹಾಸನ: ಎಸ್ಎಸ್ಎಲ್ಸಿ ಫಲಿತಾಂಶ ದಲ್ಲಿ ಹಾಸನ ಜಿಲ್ಲೆ ನಾಲ್ಕನೇ ಸ್ಥಾನ ಪಡೆದಿದೆ. ಇದನ್ನು ಉಳಿಸಿಕೊಳ್ಳುವುದರ ಜೊತೆಗೆ ಮುಂದಿನ ವರ್ಷ ಇನ್ನೂ ಉತ್ತಮ ಸ್ಥಾನ ಮಾಡಲು ಈ ವರ್ಷದ ಆರಂಭದಿಂದಲೇ ಪ್ರಯತ್ನಿಸಿ, ಮಕ್ಕಳನ್ನು ಅಣಿಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಕರ್ನಾಟಕ ಪಬ್ಲಿಕ್ ಶಾಲೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಈ ಬಾರಿಯ ಫಲಿತಾಂಶ ತಮ್ಮ ಜವಾಬ್ದಾರಿ ಹೆಚ್ಚಿಸಿದೆ. ಈ ನಿಟ್ಟಿನಲ್ಲಿ ಮುಂದಿನ ವರ್ಷದಲ್ಲಿ ಜಿಲ್ಲೆಯು ಉನ್ನತ ಸ್ಥಾನ ಪಡೆಯಲು ಆರಂಭದಿಂದಲೇ ಪರಿಶ್ರಮ ಹಾಕಿ ಎಂದು ತಿಳಿಸಿದರು.

ಪ್ರತಿ ವರ್ಷ ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಕಡಿಮೆ ಆಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ, ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಗಾಗಿ ಹೆಚ್ಚಿನ ಪ್ರಯತ್ನ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆಯಿಲ್ಲ. ಶೇಕಡವಾರು ಫಲಿತಾಂಶದಲ್ಲಿ ಬಹಳ ಅಂತರವಿಲ್ಲ ಎಂದ ಅವರು, ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯಗಳಿಗೆ ಕೊರತೆ ಇಲ್ಲ. ಅಧಿಕಾರಿಗಳು ಆಸಕ್ತಿ ವಹಿಸುವ ಮೂಲಕ ಪಿಯುಸಿ ದಾಖಲಾತಿಯನ್ನು ಹೆಚ್ಚಿಸುವಂತೆ ಸೂಚಿಸಿದರು.

ಶಾಸಕ ಕೆ.ಎಂ.ಶಿವಲಿಂಗೇಗೌಡ ಮಾತನಾಡಿ, ಬಡಮಕ್ಕಳ ವಿದ್ಯಾಭ್ಯಾಸಕ್ಕೆ ಈ ಶಾಲೆಗಳು ಸಹಕಾರಿಯಾಗಿದ್ದು, ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ತಿಳಿಸಿದರು.

ಸಂಸದ ಶ್ರೇಯಸ್ ಪಟೇಲ್, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-36-1574630357

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.