ಹಾಸನ: ‘ಹಾಸನಾಂಬ ದರ್ಶನೋತ್ಸವಕ್ಕೆ ಬರುತ್ತಿರುವ ಭಕ್ತರು ಹೆಚ್ಚಾಗಿದ್ದು, ನೂಕು ನುಗ್ಗಲು ಉಂಟಾಗಿ ಅಹಿತಕರ ಘಟನೆ ನಡೆದರೆ ಪೊಲೀಸ್ ಇಲಾಖೆ ಜವಾಬ್ದಾರಿಯಾಗದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಅವರು ಜಿಲ್ಲಾಧಿಕಾರಿಗೆ ಬರೆದಿರುವ ಪತ್ರ ಸಾಮಾಜಿಕ ಮಾಧ್ಯಮಗಳಲ್ಲಿ ಶನಿವಾರ ಹರಿದಾಡಿತ್ತು.
.ಹಾಸನಾಂಬ ದರ್ಶನಕ್ಕೆ ಒಂದೇ ದಿನ 4 ಲಕ್ಷ ಭಕ್ತರು.
ಶುಕ್ರವಾರ ಎಸ್ಪಿ ಪತ್ರ ಬರೆದಿದ್ದು, ‘ಅಕ್ಟೋಬರ್ 9 ರಿಂದ 23ರ ವರೆಗೆ ದರ್ಶನೋತ್ಸವ ನಡೆಯುತ್ತಿದ್ದು, ಹೊರ ಜಿಲ್ಲೆಗಳಿಂದ ಭಕ್ತರು ಬರುತ್ತಿದ್ದಾರೆ. ಜನರನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕಿದೆ. ದರ್ಶನಕ್ಕೆ ವ್ಯವಸ್ಥೆ ಮಾಡಿರುವ ಸ್ಥಳಾವಕಾಶ ಕಡಿಮೆಯಾಗುತ್ತಿದೆ’ ಎಂದಿದ್ದಾರೆ.
.ಹಾಸನಾಂಬ ದೇವಿ: ಧರ್ಮದರ್ಶನಕ್ಕೆ ಶಿಷ್ಟಾಚಾರ ಅಡ್ಡಿ .
‘ಎಲ್ಲ ಸಾಲುಗಳು ನಿಗದಿತ ಪ್ರಮಾಣ ಮೀರಿ ಮೂರ್ನಾಲ್ಕು ಕಿ.ಮೀ. ವರೆಗೂ ಬಂದಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಸಾಲು ರಜೆಗಳಿದ್ದು, ದರ್ಶನಕ್ಕೆ ಸಾವಿರಾರು ಭಕ್ತರು ಬರಲಿದ್ದಾರೆ. ನೂಕುನುಗ್ಗಲು ಉಂಟಾಗುತ್ತದೆ. ಅಹಿತಕರ ಘಟನೆಗಳು ನಡೆಯುವ ಸಾಧ್ಯತೆ ಹೆಚ್ಚಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸಾರಿಗೆ ಬಸ್ ಮತ್ತು ಇತರೆ ವಾಹನಗಳಲ್ಲಿ ಬರುತ್ತಿರುವ ಭಕ್ತರನ್ನು ನಿಯಂತ್ರಿಸಲು ಕ್ರಮ ವಹಿಸಬೇಕು’ ಎಂದು ಕೋರಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ಪಡೆಯಲು ಎಸ್ಪಿಯವರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಲಭ್ಯರಾಗಲಿಲ್ಲ.
.ಹಾಸನ | ದರ್ಶನಕ್ಕಾಗಿ ಸಾಲಿನಲ್ಲಿ ನಿಂತಿದ್ದು 9 ತಾಸು.ಹಾಸನ | ಕಣ್ಮನ ಸೆಳೆಯುವ ಫಲಪುಷ್ಪ ಪ್ರದರ್ಶನ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.