ಶನಿವಾರ, 18 ಅಕ್ಟೋಬರ್ 2025
×
ADVERTISEMENT
ADVERTISEMENT

ಹಾಸನಾಂಬ ದೇವಿ: ಧರ್ಮದರ್ಶನಕ್ಕೆ ಶಿಷ್ಟಾಚಾರ ಅಡ್ಡಿ

ಏಳು ದಿನಗಳಲ್ಲಿ 11.30 ಲಕ್ಷ ಮಂದಿ ಭಕ್ತರಿಂದ ಹಾಸನಾಂಬ ದೇವಿ ದರ್ಶನ
Published : 17 ಅಕ್ಟೋಬರ್ 2025, 2:04 IST
Last Updated : 17 ಅಕ್ಟೋಬರ್ 2025, 2:04 IST
ಫಾಲೋ ಮಾಡಿ
Comments
ಹಾಸನಾಂಬ ದೇವಿಯ ದರ್ಶನಕ್ಕೆ ಸರದಿಯಲ್ಲಿ ನಿಂತಿದ್ದ ಜನರಿಗಾಗಿ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು 
ಹಾಸನಾಂಬ ದೇವಿಯ ದರ್ಶನಕ್ಕೆ ಸರದಿಯಲ್ಲಿ ನಿಂತಿದ್ದ ಜನರಿಗಾಗಿ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು 
ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಕುಟುಂಬ ಸಮೇತ ದೇವಿಯ ದರ್ಶನ ಪಡೆದರು 
ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಕುಟುಂಬ ಸಮೇತ ದೇವಿಯ ದರ್ಶನ ಪಡೆದರು 
ಹಾಸನಾಂಬ ದೇವಿಯ ದೇಗುಲದ ಎದುರು ಸೇರಿದ್ದ ಜನರು 
ಹಾಸನಾಂಬ ದೇವಿಯ ದೇಗುಲದ ಎದುರು ಸೇರಿದ್ದ ಜನರು 
ಒಂದು ದಿನದಲ್ಲಿ 3 ಲಕ್ಷ ಜನರಿಗೆ ದರ್ಶನ ನೀಡುವುದು ಸವಾಲಿನ ಕೆಲಸ. ಸಾರ್ವಜನಿಕರ ಹಿತದೃಷ್ಟಿಯಿಂದ ಜನರ ಸಹಕಾರ ಅಗತ್ಯವಾಗಿದೆ.
ಕೃಷ್ಣ ಬೈರೇಗೌಡ
ಈ ದರ್ಶನ ವ್ಯವಸ್ಥೆ ಅಚ್ಚುಕಟ್ಟಾಗಿ ಮಾಡಲಾಗಿದ್ದು ಮತ್ತಷ್ಟು ಸುಧಾರಣೆ ಆಗಬೇಕಿದೆ ಜಿಲ್ಲಾಡಳಿತ ಉಸ್ತುವಾರಿ ಸಚಿವರಿಗೆ ಅಭಿನಂದನೆ ಸಲ್ಲಿಸುತ್ತೇನೆ.
ಸಿ.ಟಿ. ರವಿ ವಿಧಾನ ಪರಿಷತ್ ಸದಸ್ಯ
ದರ್ಶನ ಪಡೆದ ಗಣ್ಯರು
ಪತ್ನಿ ಹಾಗೂ ಅವಳಿ ಮಕ್ಕಳೊಂದಿಗೆ ಸಂಸದ ಶ್ರೇಯಸ್ ಪಟೇಲ್ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ದೇಶಿಕೇಂದ್ರ ಶಿವಯೋಗಿ ಸ್ವಾಮೀಜಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಟಿ.ಎ. ನಾರಾಯಣಗೌಡ ಕೆ.ಆರ್. ಪೇಟೆಯ ಶಾಸಕ ಮಂಜುನಾಥ್ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಸೇರಿದಂತೆ ಅನೇಕ ಗಣ್ಯರು ಜಿಲ್ಲಾಡಳಿತದ ಶಿಷ್ಟಾಚಾರ ವಾಹನಗಳಲ್ಲಿ ಬಂದು ದೇವಿಯ ದರ್ಶನ ಪಡೆದರು.
ಪತ್ನಿ ತಾಯಿ ಹಾಗೂ ಅವಳಿ ಮಕ್ಕಳೊಂದಿಗೆ ಸಂಸದ ಶ್ರೇಯಸ್‌ ಪಟೇಲ್‌ ಹಾಸನಾಂಬ ದೇವಿಯ ದರ್ಶನ ಪಡೆದರು 
ಪತ್ನಿ ತಾಯಿ ಹಾಗೂ ಅವಳಿ ಮಕ್ಕಳೊಂದಿಗೆ ಸಂಸದ ಶ್ರೇಯಸ್‌ ಪಟೇಲ್‌ ಹಾಸನಾಂಬ ದೇವಿಯ ದರ್ಶನ ಪಡೆದರು 
3 ದಿನ ದರ್ಶನದ ಸಮಯದಲ್ಲಿ ಬದಲಾವಣೆ
ಹಾಸನಾಂಬ ದೇವಿಯ ಅಲಂಕಾರ ಬದಲಾವಣೆ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಬೇಕಿರುವುದರಿಂದ 3 ದಿನ ದೇವಿಯ ದರ್ಶನದಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದೆ. ಗುರುವಾರ (ಅ.16) ರಾತ್ರಿ 12 ಗಂಟೆಯಿಂದ ಶುಕ್ರವಾರ ಬೆಳಗಿನ ಜಾವ 5 ಗಂಟೆಯವರೆಗೆ ದರ್ಶನ ಸ್ಥಗಿತಗೊಳಿಸಲಾಗಿತ್ತು. ಅ.18 ರಂದು ಬೆಳಿಗ್ಗೆ 5 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಹಾಗೂ ಮಧ್ಯಾಹ್ನ 3.30 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ರಾತ್ರಿ 12 ರಿಂದ ಮರುದಿನ ಬೆಳಗಿನ ಜಾವ 5 ಗಂಟೆಯವರೆಗೆ ದರ್ಶನ ಇರುವುದಿಲ್ಲ. ಅ.21 ರಂದು ಬೆಳಿಗ್ಗೆ 5 ರಿಂದ ಮಧ್ಯಾಹ್ನ 2 ಗಂಟೆ ಹಾಗೂ ಮಧ್ಯಾಹ್ನ 3.30 ರಿಂದ ರಾತ್ರಿ 12 ಗಂಟೆಯವರೆಗೆ ದರ್ಶನಕ್ಕೆ ಅವಕಾಶವಿದ್ದು ಮಧ್ಯರಾತ್ರಿ 12 ರಿಂದ ಮರುದಿನ ಬೆಳಗಿನ ಜಾವ 5 ಗಂಟೆಯವರೆಗೆ ದರ್ಶನಕ್ಕೆ ಅವಕಾಶವಿಲ್ಲ.
ಶಕ್ತಿ ಯೋಜನೆ: ಹೆಚ್ಚಿದ ಮಹಿಳೆಯರು
ಹಾಸನಾಂಬ ದರ್ಶನಕ್ಕೆ ತಂಡೋಪತಂಡವಾಗಿ ಮಹಿಳೆಯರು ಬರುತ್ತಿದ್ದು ಉತ್ತಮ ಬೆಳವಣಿಗೆಯಾಗಿದೆ. ಹಾಸನ ನಗರಕ್ಕೆ ಪ್ರವೇಶ ಮಾಡಿದ ಕೂಡಲೇ ನಾನು ಗಮನಿಸಿದ್ದೇನೆ. ಪ್ರತಿ ರಸ್ತೆಯಲ್ಲೂ ಮಹಿಳೆಯರನ್ನು ಕಂಡಿದ್ದು ಶಕ್ತಿ ಯೋಜನೆಯ ಪರಿಣಾಮ ಮಹಿಳೆಯರ ಸಂಖ್ಯೆ ಹೆಚ್ಚಿದೆ ಎಂದು ಗ್ಯಾರಂಟಿ ಅನುಷ್ಠಾನದ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪ ಅಮರನಾಥ್ ಸಂತಸ ವ್ಯಕ್ತಪಡಿಸಿದರು. ಹಾಸನಾಂಬ ದರ್ಶನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರ ಪ್ರಾಮಾಣಿಕ ಪ್ರಯತ್ನದಿಂದ ಇಂದು ದರ್ಶನೋತ್ಸವ ಯಶಸ್ಸಿನ ಕಡೆ ಸಾಗುತ್ತಿದ್ದು ಮುಂದೆಯೂ ಅಚ್ಚುಕಟ್ಟಾಗಿ ದರ್ಶನೋತ್ಸವ ಸಾಗಲಿ ಎಂದು ಶುಭ ಕೋರಿದರು.
ಹಾಸನದ ಬಸ್‌ ನಿಲ್ದಾಣದಲ್ಲಿ ಬಸ್‌ ಹತ್ತುತ್ತಿರುವ ಮಹಿಳೆಯರು 
ಹಾಸನದ ಬಸ್‌ ನಿಲ್ದಾಣದಲ್ಲಿ ಬಸ್‌ ಹತ್ತುತ್ತಿರುವ ಮಹಿಳೆಯರು 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT