ಹಾಸನ: ಸಮಾಜದ ವಿವಿಧ ವರ್ಗಗಳ ಅಭಿವೃದ್ಧಿ ಹಾಗೂ ಬಡವರ ಕಲ್ಯಾಣಕ್ಕಾಗಿ 2026-27ನೇ ಸಾಲಿನಲ್ಲಿ ಹಲವು ಮಹತ್ವದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಾಗುವುದು ಎಂದು ಹಾಸನಾಂಬದೇವಿ ನಾಗರಿಕರ ವೇದಿಕೆಯ ಅಧ್ಯಕ್ಷ ಲೋಕೇಶ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಹಾಗೂ ಜವೇನಹಳ್ಳಿ ಮಠದ ಸಂಗಮೇಶ್ವರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಸಮಾಜಮುಖಿ ಚಟುವಟಿಕೆ ಹಮ್ಮಿಕೊಳ್ಳಲಾಗಿದೆ ಎಂದರು. ವೇದಿಕೆ ವತಿಯಿಂದ ಬಡ ಮಕ್ಕಳಿಗೆ ಉಚಿತ ಶಿಕ್ಷಣಕ್ಕೆ ಸಹಕಾರ, ಪ್ರತಿ ತಿಂಗಳು ಒಂದು ದೇವಸ್ಥಾನ ಸ್ವಚ್ಛತೆ, ಉಚಿತ ಹೊಲಿಗೆ ಮತ್ತು ಕಂಪ್ಯೂಟರ್ ತರಬೇತಿ, ವರ್ಷಕ್ಕೆ 108 ಉಚಿತ ಸಾಮೂಹಿಕ ವಿವಾಹ ಆಯೋಜನೆಗೆ ತೀರ್ಮಾನಿಸಲಾಗಿದೆ ಎಂದರು.

ಗೃಹ ಕೈಗಾರಿಕಾ ಉತ್ಪನ್ನಗಳ ಪ್ಯಾಕಿಂಗ್ ಹಾಗೂ ಮಾರುಕಟ್ಟೆ ವ್ಯವಸ್ಥೆಗೆ ನೆರವು, ರೈತರಿಗೆ ಕೃಷಿ ಸಾಲ ಹಾಗೂ ಸ್ಥಳೀಯ ಬೀಜ ಬಳಸಿ ಬೆಳೆ ಬೆಳೆಯಲು ಪ್ರೋತ್ಸಾಹ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿಗೆ ವಿಶೇಷ ಯೋಜನೆ, ಗ್ರಾಮೀಣ ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಪ್ರಧಾನ ಕಾರ್ಯದರ್ಶಿ ನೀತು ಕೊಥಾರಿ, ಗೌರವಾಧ್ಯಕ್ಷ ಮಂಜುನಾಥ್ ಬಿ.ಎನ್., ಸಹಕಾರ್ಯದರ್ಶಿ ವಿಜಯಕುಮಾರ್, ಕಾನೂನು ಸಲಹೆಗಾರ ಟಿ. ಗಣೇಶ್, ಸಂಚಾಲಕ ಶಿವಕುಮಾರ್, ಉಪಾಧ್ಯಕ್ಷೆ ಮಂಜುಳ, ಜಂಟಿ ಕಾನೂನು ಸಲಹೆಗಾರ್ತಿ ಸುಶೀಲಾದೇವಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-36-426604561

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.