ಗುರುವಾರ , ಅಕ್ಟೋಬರ್ 22, 2020
22 °C
ನ.5 ರಿಂದ ಹಾಸನಾಂಬ ಜಾತ್ರಾ ಮಹೋತ್ಸವ

ಹಾಸನಾಂಬೆ ನೇರ ದರ್ಶನ ಇಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ವರ್ಷಕ್ಕೊಮ್ಮೆ ದರುಶನ ಕರುಣಿಸುವ ಹಾಸನಾಂಬೆ ನೇರ ದರ್ಶನಕ್ಕೆ ಈ ಬಾರಿ ಸಾರ್ವಜನಿಕರಿಗೆ ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ನ. 5 ರಿಂದ 17ರವರೆಗೆ ದೇಗುಲದ ಬಾಗಿಲು ತೆರೆಯಲಿದ್ದು, ನಗರದ 12 ಕಡೆ ಎಲ್‌ಇಡಿ ಪರದೆ ಅಳವಡಿಸಿ ದರ್ಶನ ನೇರ ಪ್ರಸಾರ ಮಾಡಲಾಗುವುದು. ಹೊರ ಜಿಲ್ಲೆ ಹಾಗೂ ರಾಜ್ಯದವರಿಗೆ ವೆಬ್‌ಸೈಟ್‌ ಮೂಲಕ ಆನ್‌ಲೈನ್‌ ದರ್ಶನ ಭಾಗ್ಯ ಕಲ್ಪಿಸಲಾಗುವುದು ಎಂದು ಹೇಳಿದರು.

ಜಾತ್ರಾ ಮಹೋತ್ಸವ ಉದ್ಘಾಟನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಹ್ವಾನಿಸಲಾಗುವುದು. ಮೊದಲ ಹಾಗೂ ಕೊನೆಯ ದಿನ ಜನಪ್ರತಿನಿಧಿಗಳಿಗೆ ಮಾತ್ರ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.