ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನದಲ್ಲೂ ಲಾಕ್‌ಡೌನ್‌ ಮಾಡಲು ಆಗ್ರಹ

Last Updated 14 ಜುಲೈ 2020, 13:26 IST
ಅಕ್ಷರ ಗಾತ್ರ

ಹಾಸನ: ದಿನದಿಂದ ದಿನಕ್ಕೆ ಕೋವಿಡ್‌ 19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯನ್ನು ಲಾಕ್‌ಡೌನ್‌ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ ಅವರು ಸರ್ಕಾರವನ್ನು ಆಗ್ರಹಿಸಿದರು.

ಈಗಾಗಲೇ ಜನರೇ ಸ್ವಯಂ ಪ್ರೇರಿತವಾಗಿ ಜಿಲ್ಲೆಯಲ್ಲಿ ಭಾಗಶಃ ಲಾಕ್‌ಡೌನ್‌ ಮಾಡಿದ್ದಾರೆ. ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ಹದಿನಾಲ್ಕು ದಿನ ಸಂಪೂರ್ಣ ಲಾಕ್‌ಡೌನ್‌ ಮಾಡಿ ಒಂದು ವಾರ ಕಳೆದಿದೆ. ಅಂದಿನಿಂದ ತಾಲ್ಲೂಕಿನಲ್ಲಿ ಸೋಂಕು ಹರಡುತ್ತಿರುವ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ ಎಂದು ಅಭಿಪ್ರಾಯಪಟ್ಟರು.

ಚನ್ನರಾಯಪಟ್ಟಣದಂತೆಯೇ ಜಿಲ್ಲೆಯ ಅರಸೀಕೆರೆ, ಸಕಲೇಶಪುರ, ಹಾಸನ, ಹೊಳೆನರಸೀಪುರ ತಾಲ್ಲೂಕುಗಳಲ್ಲೂ ಮಧ್ಯಾಹ್ನದ ನಂತರ ಜನರೇ ಸ್ವಯಂ ಪ್ರೇರಿತರಾಗಿ ಲಾಕ್‌ಡೌನ್‌ ಮಾಡುತ್ತಿದ್ದಾರೆ. ಹಾಗಾಗಿ ಸರ್ಕಾರವೇ ಜಿಲ್ಲೆಯನ್ನು ಅಧಿಕೃತವಾಗಿ ಲಾಕ್‌ಡೌನ್‌ ಮಾಡಿದರೆ ಒಳಿತು. ಇದರಿಂದ ಸೋಂಕು ಹರಡುವುದನ್ನು ನಿಯಂತ್ರಿಸಬಹುದು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT