ಹಾವೇರಿ: ‘ಭಕ್ತರ ಕಷ್ಟಗಳನ್ನು ದೂರ ಮಾಡುವ ಶಕ್ತಿ ಗುರು ಪರಂಪರೆಗಿದೆ. ಗುರುವಿನ ಮಾರ್ಗದಲ್ಲಿ ನಡೆಯುವ ಮೂಲಕ ಮಕ್ಕಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ನೀಡಬೇಕು’ ಎಂದು ದಿಂಡದಹಳ್ಳಿ ಪಶುಪತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಹನುಮನಹಳ್ಳಿ ಗ್ರಾಮದ ಹಾಲಸ್ವಾಮಿ ಮಠದಲ್ಲಿ ಮುಳ್ಳು ಗದ್ದುಗೆ ಜಾತ್ರಾ ಮಹೋತ್ಸವ ಪ್ರಯುಕ್ತ ಸೋಮವಾರ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಹಾಗೂ ಧರ್ಮ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ನಮ್ಮ ರಾಜ್ಯ, ದೇಶಗಳಲ್ಲಿ ಮಠಾ ಧೀಶರು, ಮಹಾತ್ಮರ ಜೀವನಾನುಷ್ಠಾನ, ಚೈತನ್ಯದ ತಪೋಶಕ್ತಿ ಬಹಳ ಪ್ರಾಮುಖ್ಯತೆ ಪಡೆದಿದೆ. ಸದಾಕಾಲ ಸದ್ಭಕ್ತರ ಒಳಿತಿಗಾಗಿ ಮಠ ಮಾನ್ಯಗಳು ಶ್ರಮಿಸುತ್ತವೆ. ಪ್ರಸ್ತುತ ದಿನಗಳಲ್ಲಿ ಗುರು ಪರಂಪರೆ ಬಹಳಷ್ಟು ಗಟ್ಟಿಯಾಗುವ ಅವಶ್ಯಕತೆ ಇದೆ. ಹರ ಮುನಿದರೂ ಗುರು ಕಾಯುವನು, ಗುರು ಮುನಿದರೆ ಯಾರು ಕಾಪಾಡಲ್ಲ. ಗುರುವಿನ ಆಜ್ಞೆಯಂತೆ ಭಕ್ತರು ನಡೆದುಕೊಳ್ಳಬೇಕು. ಗುರುವಿನ ವಾಕ್ಯಗಳನ್ನು ಪ್ರತಿಯೊಬ್ಬರೂ ಪಾಲನೆ ಮಾಡಬೇಕು. ಅಂದಾಗ ಮಾತ್ರ ಜೀವನ ದಲ್ಲಿ ಯಶಸ್ಸು ಸಾಧಿಸಲು ಸಾಧ್ಯ’ ಎಂದರು.

‘ಹೊಸದಾಗಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ನವ ವಧು–ವರರು ತಮ್ಮ ಬದುಕಿನುದ್ದಕ್ಕೂ ಪರಸ್ಪರ, ಪ್ರೀತಿ, ವಿಶ್ವಾಸ, ನಂಬಿಕೆಯನ್ನಿಟ್ಟು ಬದುಕಿನ ಕ್ಷಣಗಳನ್ನು ಅನುಭವಿಸ ಬೇಕು. ಗಂಡ ಹೆಂಡತಿ ಅನ್ಯೋನ್ಯವಾಗಿ ಜೀವನ ನಡೆಸಬೇಕು. ಮನೆಗೆ ಬಂದಾಗ ಸೊಸೆಯನ್ನು ಅತ್ತೆ ಮಗಳಂತೆ ಕಾಣಬೇಕು, ಸೊಸೆಯು ಕೂಡ ತನ್ನ ಅತ್ತೆಯನ್ನು ತಾಯಿಯಂತೆ ಕಾಣಬೇಕು. ಅಂದಾಗ ಮಾತ್ರ ಅತ್ತೆ–ಸೊಸೆ ಬಾಂಧವ್ಯದ ಬೆಸುಗೆ ಸಹಬಾಳ್ವೆಯಿಂದ ಕೂಡಿರುತ್ತದೆ’ ಎಂದರು.

ಅಗಡಿ ಅಕ್ಕಿಮಠದ ಗುರುಲಿಂಗ ಸ್ವಾಮೀಜಿ ಮಾತನಾಡಿ, ‘ಮನೆಯೇ ಮೊದಲ ಪಾಠಶಾಲೆ. ತಾಯಿಯೇ ಮೊದಲ ಗುರು. ಧರ್ಮಸಭೆಯಲ್ಲಿ ಪಾಲ್ಗೊಂಡಿರುವ ತಾಯಂದಿರು, ತಮ್ಮ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಕೊಡಬೇಕು. ಒಳ್ಳೆಯ ಸಂಸ್ಕಾರ, ಸಂಸ್ಕೃತಿ, ಧರ್ಮ, ಆಚಾರ ವಿಚಾರಗಳ ಬಗ್ಗೆ ತಿಳಿ ಹೇಳಬೇಕು. ಭವಿಷ್ಯದ ಸಮಾಜದಲ್ಲಿ ಜವಾಬ್ದಾರಿಯುತ ವ್ಯಕ್ತಿಯನ್ನಾಗಿ ಬೆಳೆಸಬೇಕು. ಸಮಾಜ ನನಗೇನು ಕೊಟ್ಟಿದೆ ಎನ್ನುವುದಕ್ಕಿಂತ, ಸಮಾಜಕ್ಕೆ ನಾನೇನು ಕೊಡುಗೆ ನೀಡಿದೆ ಎಂಬುದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು’ ಎಂದು ಹೇಳಿದರು.

‘ಮಕ್ಕಳ ಬದುಕಿಗೆ ಪೋಷಕರೇ ಶಿಲ್ಪಿಗಳು. ಆ ಶಿಲ್ಪಿಗಳು ಹೇಗೆ ಮಕ್ಕಳನ್ನು ಬೆಳೆಸುತ್ತಾರೆ ಎಂಬುದರ ಮೇಲೆ ಮಕ್ಕಳ ಭವಿಷ್ಯ ನಿರ್ಧಾರ ಆಗುತ್ತದೆ. ಈ ನಿಟ್ಟಿನಲ್ಲಿ ಧರ್ಮ ಸಂಸ್ಕೃತಿ ಪರಂಪರೆಯಡಿ ಮಕ್ಕಳನ್ನು ಬೆಳೆಸಬೇಕು’ ಎಂದರು.

ಹಾಲಸಿದ್ಧರಾಮ ಸ್ವಾಮೀಜಿ, ಗಂಜಿಗಟ್ಟಿ ಚರಮೂರ್ತೇಶ್ವರ ಮಠದ ಶಿವಲಿಂಗೇಶ್ವರ ಸ್ವಾಮೀಜಿ, ಕುರುವತ್ತಿಯ ಸಿದ್ಧನಂದೀಶ್ವರ ಶಿವಾ ಚಾರ್ಯ ಸ್ವಾಮೀಜಿ, ಹಾಲಮುದುಕೇಶ್ವರ ಸ್ವಾಮೀಜಿ, ಅಭಿನವ ಹಾಲಸ್ವಾಮೀಜಿ, ಸಣ್ಣ ಹಾಲಸ್ವಾಮೀಜಿ, ಅಭಿಷೇಕ ಹಾಲಸ್ವಾಮೀಜಿ, ಓಂಕಾರ ಹಾಲಸ್ವಾಮೀಜಿ, ಯೂತ್ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ದರ್ಶನಕುಮಾರ ಲಮಾಣಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-22-317665220

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.